ಮುಖ್ಯಮಂತ್ರಿ, ಗೃಹ ಸಚಿವರು ಸಮರ್ಥರಿದ್ದಾರೆ – ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರಿಸಿರುವುದು ಸ್ವಾಗತಾರ್ಹ

ಸುದ್ದಿ360 ದೊಡ್ಡಬಳ್ಳಾಪುರ, ಜು.30: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ಪ್ರಕರಣವನ್ನು ಸರ್ಕಾರ ರಾಷ್ಟ್ರೀಯ ತನಿಖಾ ದಳಕ್ಕೆ(NIA) ಹಸ್ತಾಂತರಿಸಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ದೊಡ್ಡಬಳ್ಳಾಪುರ ತಾಲೂಕು ವೀರಶೈವ ಲಿಂಗಾಯತ ಸಮಾಜ ಆಯೋಜಿಸಿರುವ ಶ್ರೀ ಶಿವಕುಮಾರ ಸ್ವಾಮೀಜಿಯವರ ಗುರುವಂದನಾ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಸಮರ್ಥರಿದ್ದಾರೆ. ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಏನೆಲ್ಲಾ ನಡೆದಿದೆ ಎಂಬುದು ರಾಜ್ಯದ ಜನರಿಗೆ ಗೊತ್ತಿದೆ. ಮಂಗಳೂರಿನಲ್ಲಿ ನಡೆದ ಪ್ರವೀಣ್ ಹತ್ಯೆ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರಿಗೂ ನೋವಾಗಿದೆ. ಪ್ರಕರಣದಲ್ಲಿ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಎನ್ಐಎ ತನಿಖೆಗೆ ಹಸ್ತಾಂತರಿಸಿರುವುದು ಸ್ವಾಗತಾರ್ಹ ಎಂದರು.

ಕಾಂಗ್ರೆಸ್ ನ ಸಣ್ಣತನ:

ಇಂತ ಸೂಕ್ಷ್ಮ ವಿಚಾರಗಳಲ್ಲಿ ಕಾಂಗ್ರೆಸ್ ಪಕ್ಷದವರು ಸಣ್ಣತನ ತೋರುತ್ತಿರುವುದು ಸರಿಯಲ್ಲ. ತಪ್ಪಿತಸ್ಥರು ಯಾರೇ ಆಗಲಿ ಅವರಿಗೆ ಕಠಿಣ ಶಿಕ್ಷೆ ಕೊಡಿಸುವುದು ನಮ್ಮ ಮುಂದಿರುವ ಗುರಿ ಎಂದರು.

ಪ್ರವೀಣ್ ಹತ್ಯೆ ದಿನವೇ ಮುಸ್ಲಿಂ ಯುವಕನ ಹತ್ಯೆ ನಡೆದರೂ ಸರ್ಕಾರ ಪರಿಹಾರ ವಿತರಣೆಯಲ್ಲಿ ತಾರತಮ್ಯ ಎಸಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಪಕ್ಷದ ಕಾರ್ಯಕರ್ತನಾಗಿದ್ದರಿಂದ ಪ್ರವೀಣ್ ಕುಟುಂಬಕ್ಕೆ ಪಕ್ಷದ ವತಿಯಿಂದ 25 ಲಕ್ಷ ಪರಿಹಾರ‌ ನೀಡಲಾಗಿದೆ. ಸರ್ಕಾರದಿಂದ ಪರಿಹಾರ ನೀಡಿರುವ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದರು. ಮುಖ್ಯಮಂತ್ರಿ ಅವರಿಗೆ ಹಿಂದು ಮುಸ್ಲಿಂ ಎಂಬ ಬೇಧವಿಲ್ಲ. ಸಮಯದ ಅಭಾವದಿಂದ ಮುಸ್ಲಿಂ ಕುಟುಂಬವನ್ನು ಭೇಟಿಯಾಗಲು ಸಾಧ್ಯವಾಗಿಲ್ಲದೇ ಇರಬಹುದು ಎಂದು ಪ್ರಶ್ನೆಯೊಂದಕ್ಕೆ ವಿಜಯೇಂದ್ರ ಉತ್ತರಿಸಿದ್ದಾರೆ.

admin

admin

Leave a Reply

Your email address will not be published. Required fields are marked *

error: Content is protected !!