ಮೂವರು ಸಾಧಕರಿಗೆ ಎಚ್.ಡಿ. ದೇವೇಗೌಡ ಪ್ರತಿಷ್ಠಾನ ಪ್ರಶಸ್ತಿ ಪ್ರದಾನ (ಆ.7ಕ್ಕೆ)

ಸುದ್ದಿ360 ದಾವಣಗೆರೆ, ಆ.4: ನಗರದ ಕುವೆಂಪು ಕನ್ನಡ ಭವನದಲ್ಲಿ ಆ.7ರ ಮಧ್ಯಾಹ್ನ 12 ಗಂಟೆಗೆ 2022ನೇ ಸಾಲಿನ ಎಚ್.ಡಿ. ದೇವೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹುಟ್ಟುಹಬ್ಬದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಎಚ್.ಡಿ. ದೇವೇಗೌಡ ಪ್ರತಿಷ್ಠಾನದಿಂದ ಪ್ರಶಸ್ತಿ ನೀಡುತ್ತಾ ಬರಲಾಗಿದೆ. ಆದರೆ ಕೋವಿಡ್ ಕಾರಣದಿಂದ ಕಳೆದ ಎರಡು ವರ್ಷ ಸಮಾರಂಭ ನಡೆಸಿರಲಿಲ್ಲ. ಹೀಗಾಗಿ ಈ ಬಾರಿ 2020, 21 ಮತ್ತು 22ನೇ ಸಾಲಿನ ಮೂವರು ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

2020ನೇ ಸಾಲಿನ ಪ್ರಶಸ್ತಿಗೆ ಜನಪದ ಕ್ಷೇತ್ರದ ಶ್ರೇಷ್ಠ ಸಾಧಕ ಸಿದ್ಧನಮಠದ ಯುಗಧರ್ಮ ರಾಮಣ್ಣ, ಭಾಜನರಾಗಿದ್ದು, ಕೋವಿಡ್ ಸಂದರ್ಭದಲ್ಲಿ ಜನ ಮೆಚ್ಚುವಂತೆ ಸೇವೆ ಸಲ್ಲಿಸಿದ ದಾವಣಗೆರೆ ಜಿಲ್ಲಾ ಸರ್ವೇಕ್ಷಣಾಕಾರಿ ಡಾ.ಡಿ.ಜಿ. ರಾಘವನ್ ಅವರು 2021ನೇ ಸಾಲಿನ ಎಚ್‌ಡಿಡಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 2022ನೇ ಸಾಲಿನ ಪ್ರಶಸ್ತಿಗೆ ಆಂಧ್ರಪ್ರದೇಶ ಮೂಲದ ಸಾಮಾಜಿಕ ಹೋರಾಟಗಾರ ಮಂದಕೃಷ್ಣ ಮಾದಿಗ ಅವರನ್ನು ಆಯ್ಕೆ ಮಾಡಲಾಗಿದೆ.

ಶಾಸಕ ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಪ್ರತಿಷ್ಠಾನದ ಗೌರವಾಧ್ಯಕ್ಷ ಬಂಡೆಪ್ಪ ಕಾಶೆಂಪುರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಪ್ರಶಸ್ತಿ ಪ್ರದಾನ ಮಾಡುವರು. ಹಾಸನ ಸಂಸದ ಪ್ರಜ್ವಲ್ ರೇವಣ್ಣ, ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರತಿಷ್ಠಾನ ಪ್ರಕಟಣೆಯಲ್ಲಿ ತಿಳಿಸಿದೆ.

admin

admin

Leave a Reply

Your email address will not be published. Required fields are marked *

error: Content is protected !!