ಸಚಿವ ಈಶ್ವರ ಬಿ. ಖಂಡ್ರೆ ದಾವಣಗೆರೆ ಭೇಟಿ

ದಾವಣಗೆರೆ: ಕರ್ನಾಟಕ ಸರ್ಕಾರದ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ಆದ ಈಶ್ವರ ಬಿ. ಖಂಡ್ರೆ ಅವರು ಜೂನ್ 16ರಂದು ದಾವಣಗೆರೆ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದು, ಪ್ರವಾಸದ ವಿವರ ಇಂತಿದೆ.

ಸಚಿವರು ಬೆ.10ಕ್ಕೆ ಬೆಂಗಳೂರಿನಿಂದಿ ರಸ್ತೆ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದು, ಬೆ.12ಕ್ಕೆ ಚಿತ್ರದುರ್ಗ ತಲುಪಿ, ಶ್ರೀ ಇಮ್ಮಡಿ ಸಿದ್ರಾಮೇಶ್ವರ ಭೋವಿ ಗುರುಪೀಠ ಸ್ವಾಮಿಜಿಯವರನ್ನು ಭೇಟಿ ಮಾಡಲಿದ್ದಾರೆ.

12.30ಕ್ಕೆ ಚಿತ್ರದುರ್ಗದಿಂದ ಹೊರಟು 1.30ಕ್ಕೆ ದಾವಣಗೆರೆ ತಲುಪಿ, ಕಾಂಗ್ರೆಸ್ನ ಹಿರಿಯ ಶಾಸಕರಾದ ಶಾಮನೂರು ಶಿವಶಂಕರಪ್ಪ ಅವರ 93ನೇ ಹುಟ್ಟುಹಬ್ಬದಲ್ಲಿ ಪಾಲ್ಗೊಳ್ಳಲಿದ್ದಾರೆ.

ನಂತರ ಮಧ್ಯಾಹ್ನ 2.15ರಿಂದ 2.30ರ ಸಮಯದಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರುಪೀಠಕ್ಕೆ ಭೇಟಿ ನೀಡಲಿದ್ದಾರೆ.

ಮಧ್ಯಾಹ್ನ 3.00 ಗಂಟೆಯಿಂದ 5.00 ಗಂಟೆಯ ವರೆಗೆ ಅರಣ್ಯ ಇಲಾಖೆಯ ಬಳ್ಳಾರಿ ವೃತ್ತ ಮಟ್ಟದ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಭೆಯು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿದೆ.

5.30ಕ್ಕೆ ಬಾಪೂಜಿ ಎಂ.ಬಿ.ಎ. ಕಾಲೇಜ್ ರಸ್ತೆಯ ಪಕ್ಕ ಸಸಿ ನೆಡುವ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಲಿದ್ದು, 6 ಗಂಟೆಗೆ ಎಂಬಿಎ ಕಾಲೇಜ್ ಸಭಾಂಗಣದಲ್ಲಿ ನಡೆಯವು ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ 7.30ಕ್ಕೆ ದಾವಣಗೆರೆಯಿಂದ ಬೆಂಗಳೂರಿಗೆ ರಸ್ತೆ ಮೂಲಕ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Comment

error: Content is protected !!