ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ನಿಧನ

ಸುದ್ದಿ360 ಬೆಂಗಳೂರು ಆ.22: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ (40) ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ನಿಧನರಾದರು.

ಇಂದು (ಆ.22) ಬೆಳಿಗ್ಗೆ ಜಿಮ್‌ಗೆ ಹೋಗಿದ್ದ ಅವರು ವರ್ಕ್ಔಟ್ ಮಾಡುವ ಸಮಯದಲ್ಲಿ ಕುಸಿದುಬಿದ್ದಿದ್ದರು. ತಕ್ಷಣ ಅವರನ್ನು ನಾಗರಭಾವಿಯ ಖಾಸಗಿ ಆಸ್ಪತ್ರೆಗೆ ಸಾಗಿಸಿತಾದರೂ ಪ್ರಯೋಜನ ಆಗಲಿಲ್ಲ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವರಾಗಿದ್ದಾಗಲೂ ಮಾಧ್ಯಮ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ಗುರುಲಿಂಗಸ್ವಾಮಿ ಅವರು ಅದಕ್ಕೂ ಮೊದಲು ವಿವಿಧ ಪತ್ರಿಕೆ, ಟಿವಿ ಚಾನೆಲ್‌ಗಳಲ್ಲಿ ಕಾರ್ಯನಿರ್ವಹಿಸಿದ್ದರು.

Leave a Comment

error: Content is protected !!