ಸುದ್ದಿ360 ಚಂಡಿಗಡ, ಜೂನ್ 28: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚಂಡಿಗಡದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಆರಂಭವಾದ ಎರಡು ದಿನಗಳ 47ನೇ ಜಿಎಸ್ಟಿ ಸಭೆಯಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕಾಣಿಕೆ ನೀಡಿ ಗೌರವಿಸಿದರು. ನಂತರ ಕೆಲಕಾಲ ವಿವಿಧ ವಿಷಯಗಳ ಕುರಿತು ಸಮಾಲೋಚನೆ ನಡೆಯಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ , ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಸಿ.ಶಿಖಾ ಉಪಸ್ಥಿತರಿದ್ದರು