ದಾವಣಗೆರೆ: ಜಿಲ್ಲಾ ಪೊಲೀಸ್ ಕಚೇರಿಯ ಆವರಣದಲ್ಲಿ ಇಂದು 77ನೇ ಗಣರಾಜ್ಯೋತ್ಸವದ ಅಂಗವಾಗಿ ಭವ್ಯವಾಗಿ ದ್ವಜಾರೋಹಣ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ರವಿಕಾಂತೇಗೌಡ, ಐಪಿಎಸ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಅಧೀಕ್ಷಕಿ ಶ್ರೀಮತಿ ಉಮಾ ಪ್ರಶಾಂತ್, ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶ್ರೀ ಪರಮೇಶ್ವರ ಹೆಗಡೆ ಸೇರಿದಂತೆ ಪೊಲೀಸ್ ಅಧಿಕಾರಿ–ಸಿಬ್ಬಂದಿಗಳು ಹಾಗೂ ಕಚೇರಿಯ ಲಿಪಿಕಾ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಈ ವೇಳೆ ಮಾನ್ಯ ಐಜಿಪಿ ಪೂರ್ವ ವಲಯ ಹಾಗೂ ಪೊಲೀಸ್ ಅಧೀಕ್ಷಕರು ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ 77ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನು ಕೋರಿದರು.
ಪೊಲೀಸ್ ಸಿಬ್ಬಂದಿಗೆ ನೂತನ ಪೀಕ್ ಕ್ಯಾಪ್ ವಿತರಣೆ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಹೆಡ್ ಕಾನ್ಸ್ಟೇಬಲ್ ಹಂತದ ಸಿಬ್ಬಂದಿಗಳಿಗೆ ನೂತನವಾಗಿ ಜಾರಿಗೆ ತರಲಾಗಿರುವ ಸ್ಲೋಚ್ ಹ್ಯಾಟ್ ಬದಲಾಗಿ ಪೀಕ್ ಕ್ಯಾಪ್ ವ್ಯವಸ್ಥೆ ಜಾರಿಗೊಂಡಿರುವ ಹಿನ್ನೆಲೆಯಲ್ಲಿ, ಮಾನ್ಯ ಐಜಿಪಿ ಪೂರ್ವ ವಲಯ ಅವರು ಸಿಬ್ಬಂದಿಗಳಿಗೆ ಸಾಂಕೇತಿಕವಾಗಿ ಪೀಕ್ ಕ್ಯಾಪ್‌ಗಳನ್ನು ವಿತರಿಸಿದರು.
ಈ ಕಾರ್ಯಕ್ರಮದಲ್ಲಿ ಪೊಲೀಸ್ ಅಧೀಕ್ಷಕಿ ಶ್ರೀಮತಿ ಉಮಾ ಪ್ರಶಾಂತ್, ಐಪಿಎಸ್ ಅವರು ಉಪಸ್ಥಿತರಿದ್ದರು.