ಭೂಕುಸಿತ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ನಿರ್ಭಂಧ: ಬದಲಿ ಸಂಚಾರ ವ್ಯವಸ್ಥೆ

ಸುದ್ದಿ360, ಶಿವಮೊಗ್ಗ ಜು.10: ಭಾರಿ ಮಳೆಯಿಂದಾಗಿ ಆಗುಂಬೆ ಘಾಟಿಯ 11ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ.

ಸ್ಥಳದಲ್ಲಿ ಭೂ ಕುಸಿತದ ಮಣ್ಣು ಮತ್ತು ಮರಮಟ್ಟುಗಳನ್ನು ತೆರವುಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ವಾಹನಗಳ ಸಂಚಾರವನ್ನು ಜುಲೈ 12ರ ಮುಂಜಾನೆ 8ಗಂಟೆಯವರೆಗೆ ನಿರ್ಬಂಧಿಸಲಾಗಿದೆ. ಆ ಬಳಿಕ ಜುಲೈ 30ರವರೆಗೆ ಈ ಮಾರ್ಗದಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು.

ಬದಲಿ ಮಾರ್ಗ ಬಳಸಿ

ಈ ಅವಧಿಯಲ್ಲಿ ತೀರ್ಥಹಳ್ಳಿ-ಕೊಪ್ಪ-ಶೃಂಗೇರಿ-ಕಾರ್ಕಳ-ಮಂಗಳೂರು, ತೀರ್ಥಹಳ್ಳಿ-ಆಗುಂಬೆ-ಶೃಂಗೇರಿ-ಕಾರ್ಕಳ-ಮಂಗಳೂರು, ತೀರ್ಥಹಳ್ಳಿ-ಮಾಸ್ತಿಕಟ್ಟೆ- ಕುಂದಾಪುರ ಮಾರ್ಗವನ್ನು ವಾಹನ ಸಂಚಾರಕ್ಕೆ ಬಳಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

admin

admin

Leave a Reply

Your email address will not be published. Required fields are marked *

error: Content is protected !!