ಸುದ್ದಿ360, ದಾವಣಗೆರೆ, ಜು.15: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾವಣಗೆರೆ ಇವರ ಸಂಯಕ್ತಾಶ್ರಯದಲ್ಲಿ “ವಿಶ್ವ ಜನಸಂಖ್ಯಾ ದಿನಾಚರಣೆ-2022” ರ “ಕುಟುಂಬ ಯೋಜನೆ ಉಪಾಯಗಳನ್ನು ನಮ್ಮದಾಗಿಸಿ, ಉನ್ನತಿಯ ಹೊಸ ಅಧ್ಯಾಯ ಬರೆಯೋಣ” ಎಂಬ ಘೋಷಣೆಯೊಂದಿಗೆ ಜು.15 ರ ಶುಕ್ರವಾರ ದಂದು ಬೆ.10.30ಕ್ಕೆ ವಿದ್ಯಾನಗರದ ಕುವೆಂಪು ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮಕ್ಕೂ ಮುನ್ನ ಬೆ.09 ಗಂಟೆಗೆ ಸಿ.ಜಿ. ಆಸ್ಪತ್ರೆ ಆವರಣದಿಂದ ಗುಂಡಿ ವೃತ್ತದ ಮುಖಾಂತರ ಡೆಂಟಲ್ ಕಾಲೇಜು ರೋಡ್ ಮಾರ್ಗವಾಗಿ ಕನ್ನಡ ಕುವೆಂಪು ಭವನದ ವರೆಗೆ ಜಾಥಾ ಹಮ್ಮಿಕೊಳ್ಳಲಾಗಿದೆ, ಜಾಥಾವನ್ನು ಜಿಲ್ಲಾಧಿಕಾರಿ ಶಿವಾನಂದ ಕಾಪಾಶಿ ಉದ್ಘಾಟಿಸುವರು.
ವೇದಿಕೆ ಕಾರ್ಯಕ್ರಮವನ್ನು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಎಸ್.ಎ ರವೀಂದ್ರನಾಥ್ ಉದ್ಘಾಟಿಸುವರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗರಾಜ್ ಅಧ್ಯಕ್ಷತೆ ವಹಿಸುವರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಲತಾ.ಎಸ್.ಎಂ. ವಿಶೇಷ ಉಪನ್ಯಾಸ ನೀಡುವರು.
ವಿಶೇಷ ಆಹ್ವಾನಿತರಾಗಿ ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಷಣ್ಮಖಪ್ಪ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಅಂಜಿನಪ್ಪ.ಎಸ್.ಆರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್.ಜಿ.ಡಿ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ನಟರಾಜ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಮೀನಾಕ್ಷಿ.ಕೆ.ಎಸ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಗಂಗಾಧರ್, ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ.ಮುರುಳೀಧರ್ ಭಾಗವಹಿಸುವರು.