ಜಿಎಂಐಟಿಯಲ್ಲಿ ಜು. 16 ರಂದು “ಆನ್ ಕ್ಯಾಂಪಸ್ ಎಂಪ್ಲಾಯ್ಮೆಂಟ್ ಆಫರ್ಸ್ ಸೆಲೆಬ್ರೇಶನ್ ಡೇ”

ಗ್ಲೋಬಲ್ ಟ್ಯಾಲೆಂಟ್ ಟ್ರ್ಯಾಕ್ ಫೌಂಡೇಶನ್ ಪುಣೆ ಸಂಸ್ಥೆಯ ಸಹಯೋಗದಲ್ಲಿ

ಸುದ್ದಿ360, ದಾವಣಗೆರೆ, ಜು.15: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಎಂಜಿನಿಯರಿಂಗ್ ಮತ್ತು ಎಂಬಿಎ ವಿದ್ಯಾರ್ಥಿಗಳು ವಿವಿಧ ಕಂಪನಿಗಳ ಸಂದರ್ಶನ ಪ್ರಕ್ರಿಯೆಯಲ್ಲಿ ಒಟ್ಟು 783 ಜಾಬ್ ಆಫರ್ಸ್ ಸ್ವೀಕರಿಸಿದ್ದಾರೆ. ಇದರಿಂದ ಮಧ್ಯ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಜಾಬ್ ಆಫರ್ಸ್ ಸ್ವೀಕರಿಸಿದ ಕಾಲೇಜು ಎಂಬ ಕೀರ್ತಿಗೆ ಪಾತ್ರವಾಗಿದೆ.

ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಇದೇ ದಿನಾಂಕ 16ನೇ ಜುಲೈ ರಂದು  ಬೆಳಗ್ಗೆ 9.30 ಕ್ಕೆ ಕಾಲೇಜಿನ ಜಿಎಂ ಹಾಲಮ್ಮ ಸಭಾಂಗಣದಲ್ಲಿ ಅದ್ದೂರಿಯ “ಆನ್ ಕ್ಯಾಂಪಸ್ ಎಂಪ್ಲಾಯ್ಮೆಂಟ್ ಆಫರ್ಸ್ ಸೆಲೆಬ್ರೇಶನ್ ಡೇ” ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಉಡುಗೊರೆಯ ಮೂಲಕ ಅಭಿನಂದನೆಗಳನ್ನು ತಿಳಿಸಲಾಗುವುದು ಎಂದು ತಿಳಿಸಿದರು. ಈ ಕಾರ್ಯಕ್ರಮವನ್ನು ಪುಣೆ ಮೂಲದ ಗ್ಲೋಬಲ್ ಟ್ಯಾಲೆಂಟ್ ಟ್ರ್ಯಾಕ್  ಫೌಂಡೇಶನ್ ಸಂಸ್ಥೆಯ ಜೊತೆಗೆ ಜಂಟಿಯಾಗಿ ಆಯೋಜಿಸಲಾಗಿದೆ.

ಜಿ ಟಿ ಟಿ ಎಫ್ ಸಂಸ್ಥೆಯಿಂದ ಶ್ರೀ ರಾಹುಲ್ ಪವರ್- ಸೀನಿಯರ್ ಮ್ಯಾನೇಜರ್,  ಶ್ರೀ ಅಮಿತ್ ಭೋಸಲೆ- ಡೈರೆಕ್ಟರ್ ಆಪರೇಷನ್, ಶ್ರೀ ನವನೀತ್ ಕುಮಾರ್, ಯುನಿವರ್ಸಿಟಿ ಅಲ್ಲಿಯನ್ಸ್ ಮ್ಯಾನೇಜರ್ ಇವರುಗಳು ಆಗಮಿಸಲಿದ್ದಾರೆ.

 ವಿದ್ಯಾರ್ಥಿಗಳು ತಮ್ಮ ಪೋಷಕರೊಡನೆ ಆಗಮಿಸಬೇಕಾಗಿ ವಿನಂತಿಸಿಕೊಳ್ಳಲಾಗಿದೆ.

ಅತ್ಯುತ್ತಮ ಮೂರು ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರುಗಳಿಗೆ ವಿಶೇಷ ರೀತಿಯಲ್ಲಿ ಸನ್ಮಾನದ ಮೂಲಕ ಅಭಿನಂದಿಸಲಾಗುವುದು ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದ್ದಾರೆ. ಮಧ್ಯ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ಆಯ್ಕೆಗೊಂಡು ಕಾಲೇಜಿಗೆ ಮತ್ತು ತಮ್ಮ ಪೋಷಕರಿಗೆ ಕೀರ್ತಿಯನ್ನು ತಂದಿರುತ್ತಾರೆ ಎಂದು ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

error: Content is protected !!