ಸುದ್ದಿ360,ದಾವಣಗೆರೆ ಜು.15: ಜಿಲ್ಲಾ ಅಕ್ಕಿಗಿರಣಿ ಮಾಲೀಕರ ಸಂಘ, ಆಹಾರ ಧಾನ್ಯಗಳ ವರ್ತಕ ಸಂಘ ಹಾಗೂ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಸಂಸ್ಥೆಗಳ ಸಹಯೋಗದೊಂದಿಗೆ ದಾವಣಗೆರೆಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಅಹಾರ ಧಾನ್ಯಗಳ ಮೇಲೆ ವಿಧಿಸಿರುವ ಶೇ. 5 ಜಿಎಸ್ ಟಿ ಹಿಂದಕ್ಕೆ ಪಡೆಯುವಂತೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅಕ್ಕಿಗಿರಣಿದಾರರ ಸಂಘದ ಕಾರ್ಯದರ್ಶಿ ಕೋಗುಂಡಿ ಬಕ್ಕೇಶಪ್ಪಮಾತನಾಡಿ, ಜಿಎಸ್ ಟಿ ಮಂಡಳಿ ಅಹಾರ ಧಾನ್ಯಗಳ ಮೇಲೆ ವಿಧಿಸಿರುವ ಶೇ. 5ರಷ್ಟು ಜಿಎಸ್ ಟಿ ವಿಧಿಸುತ್ತಿದೆ. ಈ ಬಗ್ಗೆ ಮಂಗಳವಾರ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಅಕ್ಕಿ ಗಿರಣಿದಾರರ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಸಭೆ ನಡೆದು, ಸಭೆಯ ಸರ್ವಾನುಮತದ ನಿರ್ಣಯದಂತೆ ರಾಜ್ಯದ್ಯಂತ ಬಂದ್ ನಡೆಸುವ ನಿಟ್ಟಿನಲ್ಲಿ ಆಯಾ ಜಿಲ್ಲಾವಾರು ಬಂದ್ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳು ನಮ್ಮ ಕೋರಿಕೆಯನ್ನು ಸರ್ಕಾರದ ಗಮನಕ್ಕೆ ತರುವ ಮೂಲಕ ರೈತರು ಗ್ರಾಹಕರಿಗೆ ಆಗುವ ಹೊರೆಯನ್ನು ತಪ್ಪಿಸಬೇಕು ಎಂದು ಮನವಿ ಮಾಡಿದರು.
ಒಂದು ವೇಳೆ 18ರಂದು ಜಿಎಸ್ ಟಿ ಜಾರಿಗೆ ಬಂದಲ್ಲಿ, ರಾಜ್ಯಾದ್ಯಂತ ಕ್ರಮ ಕೈಗೊಳ್ಳಲು ಸಂಘಟನೆ ಮುಂದಾಗಲಿದೆ. ಈ ಎರಡು ದಿನಗಳ ಬಂದ್ ಸಾಂಕೇತಿಕವಾಗಿದ್ದು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಕ್ಕಿ ಗಿರಣಿದಾರರ ಸಂಘದ ಪದಾಧಿಕಾರಿಗಳು, ಆಹಾರ ಧಾನ್ಯಗಳ ವರ್ತಕರು ವಾಣಿಜ್ಯ ಸಂಸ್ಥೆಗಳು ಚೌಕಿಪೇಟೆ ವರ್ತಕರು ದಲಾಲರು ಮೆಕ್ಕೆಜೋಳದ ವರ್ತಕರು ಹಾಜರಿದ್ದರು.