25, 26 ಕ್ಕೆ ಸಿಎಂ ದೆಹಲಿ ಪ್ರವಾಸ – ಬಿಟ್ಟೂ ಬಿಡದೆ ಕಾಡುತ್ತಿರುವ ಸಂಪುಟ ವಿಸ್ತರಣೆ

ವರಿಷ್ಠರು ಪ್ರಸ್ತಾಪಿಸಿದರೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

 ಸುದ್ದಿ360, ಬೆಂಗಳೂರು:ಜು.21: ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಜು. 24 ರಂದು ನವದೆಹಲಿಗೆ ತೆರಳಿತ್ತಿದ್ದೇನೆ. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಪ್ರಸ್ತಾಪಿಸಿದರೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಮಲೋಚನೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಪ್ರಧಾನಕಾರ್ಯದರ್ಶಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿ,  ವಿವಿಧ ಇಲಾಖೆಗಳ ನಿಯೋಗದೊಂದಿಗೆ ಜುಲೈ 24 ರಂದು ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದೇನೆ. ಈ ವೇಳೆ ರಾಷ್ಟ್ರದ ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಕಾರ್ಯಕ್ರಮ, ವಿವಿಧ ಇಲಾಖೆಗಳು ಮತ್ತು ಕಸ್ತೂರಿ ರಂಗನ್ ಯೋಜನೆ ವಿಚಾರವಾಗಿ ನಿಯೋಗವನ್ನು ಬೆಂಗಳೂರಿನಿಂದ ದೆಹಲಿಗೆ ಕರೆದೊಯ್ಯುತಿರುವುದಾಗಿ  ಸಿಎಂ ಬೊಮ್ಮಾಯಿ ಅವರು ತಿಳಿಸಿದರು.

ಜುಲೈ 25 ಮತ್ತು 26 ರಂದು ದೆಹಲಿಯಲ್ಲಿರುತ್ತೇನೆ. ಆ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಮೇಲಿನವರು ಪ್ರಸ್ತಾಪ ಮಾಡಿದರೆ, ನಾನು ಮಾತುಕತೆ ನಡೆಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

Leave a Comment

error: Content is protected !!