ಸುದ್ದಿ360 ದಾವಣಗೆರೆ, ಜು.23: ಇಲ್ಲಿನ ವಿದ್ಯಾನಗರ ಮುಖ್ಯರಸ್ತೆಯಲ್ಲಿರುವ ದಾವಣಗೆರೆ ವಿಶ್ವವಿದ್ಯಾಲಯದ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ಜು.25ರಿಂದ 27ರವರೆಗೆ ಮೂರು ದಿನಗಳ ಚಿತ್ರೋತ್ಸವ -2022 ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
25ರಂದು ಬೆಳಗ್ಗೆ 11 ಗಂಟೆಗೆ ನಡೆಯುವ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಕಲಾ ಪ್ರದರ್ಶನದ ಉದ್ಘಾಟನಾ ಸಮಾರಂಭಕ್ಕೆ ದಾವಣಗೆರೆ ವಿವಿ ಉಪಕುಲಪತಿ ಪ್ರೊ.ಬಿ.ಡಿ. ಕುಂಬಾರ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿರಿಯ ಕಲಾವಿದ ನಾಡೋಜ ಡಾ.ವಿ.ಟಿ. ಕಾಳೆ, ಅತಿಥಿಯಾಗಿ ಕಲಾ ನಿಕಾಯದ ಡೀನ್ ಡಾ. ವೆಂಕಟರಾವ್ ಎಂ. ಪಲಾಟೆ ಪಾಲ್ಗೊಳ್ಳುವರು. ಮಹಾವಿದ್ಯಾಲಯದ ಸಂಯೋಜನಾಕಾರಿ ಡಾ. ಸತೀಶ್ ಕುಮಾರ ಪಿ. ಮಲ್ಲೇಪುರೆ, ಫ್ಯಾಷನ್ ಡಿಸೈನ್ ವಿಭಾಗದ ಸಂಯೋಜನಾಕಾರಿ ಡಾ. ಜೈರಾಜ್ ಎಂ. ಚಿಕ್ಕಪಾಟೀಲ್ ಭಾಗವಹಿಸುವರು.
ಜು.26ರಂದು ಬೆಳಗ್ಗೆ 11 ಗಂಟೆಗೆ ಕುಲಸಚಿವ (ಮೌಲ್ಯಮಾಪನ) ಡಾ.ಕೆ. ಶಿವಶಂಕರ ಅಧ್ಯಕ್ಷತೆಯಲ್ಲಿ ಪ್ರಾತ್ಯಕ್ಷಿಕೆ ಮತ್ತು ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಸಿಂಡಿಕೇಟ್ ಸದಸ್ಯೆ ವಿಜಯಲಕ್ಷ್ಮೀ ಹಿರೇಮಠ ಅತಿಥಿಗಳಾಗಿ ಭಾಗವಹಿಸುವರು. ಟೆಕ್ನಿಕ್‌ಕಲರ್ ಗೇಮ್ಸ್ ಕಲಾ ನಿರ್ದೇಶಕ ಬಿ.ಎನ್. ವಿಚಾರ ಅನಿಮೇಷನ್ ಮತ್ತು ಮಲ್ಟಿಮೀಡಿಯಾ ಕುರಿತು ಪ್ರಾತ್ಯಕ್ಷಿಕೆ ಮತ್ತು ಉಪನ್ಯಾಸ ನಡೆಸಿಕೊಡುವರು.
ಜು.27ರಂದು ಬೆಳಗ್ಗೆ 11 ಗಂಟೆಗೆ 2021-22ನೇ ಸಾಲಿನ ವಾರ್ಷಿಕ ಕಲಾಪ್ರದರ್ಶನ ಹಾಗೂ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಣೆ ಮತ್ತು ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭ ನಡೆಯಲಿದ್ದು, ದಾವಣಗೆರೆ ವಿವಿ ಕುಲಸಚಿವೆ (ಆಡಳಿತ) ಬಿ.ಬಿ. ಸರೋಜ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಯಾಗಿ ವಿವಿ ಹಣಕಾಸು ಅಕಾರಿ ಡಿ. ಪ್ರಿಯಾಂಕ, ಅತಿಥಿಯಾಗಿ ರಾಜ್ಯ ವಿವಿ ಮತ್ತು ಕಾಲೇಜು ಅಧ್ಯಾಪಕರ ಒಕ್ಕೂಟದ ಮಾಜಿ ಅಧ್ಯಕ್ಷ ಪ್ರೊ. ಸಿ.ಎಚ್. ಮುರಿಗೇಂದ್ರಪ್ಪ ಭಾಗವಹಿಸುವರು.