ದಾವಣಗೆರೆಗೆ ಶಿಕ್ಷಣ ಸಚಿವರ ಭೇಟಿ

ದಾವಣಗೆರೆ, ಜೂ.13:  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಜೂ. 14 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 7.30 ಕ್ಕೆ ಬೆಂಗಳೂರಿನಿಂದ ಹೊರಟು 10.30 ಕ್ಕೆ ದಾವಣಗೆರೆಗೆ ಆಗಮಿಸುವರು.

ನಂತರ 10.40 ಕ್ಕೆ ದಾವಣಗೆರೆ ದಕ್ಷಿಣ ವಲಯದ ಹಳೇ ಬಿಸಲೇರಿಯ ಕುಂದೂರು ಮುರಿಗೆಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಹಸ್ತಾಂತರ ಸಮಾರಂಭದಲ್ಲಿ ಭಾಗವಹಿಸುವರು. ತದ ನಂತರ ಮಧ್ಯಾಹ್ನ 3 ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ದಾವಣಗೆರೆ-ಚಿತ್ರದುರ್ಗ ಜಿಲ್ಲೆಗಳ ಇಲಾಖಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಸಭೆ ಮುಗಿದ ನಂತರ ಸಂಜೆ 7.30 ಕ್ಕೆ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸುವುದಾಗಿ ಪ್ರಕಟಣೆ ತಿಳಿಸಿದೆ.

Leave a Comment

error: Content is protected !!