ಡಾ.ತೋಂಟದ ಸಿದ್ಧರಾಮ ಶ್ರೀಗಳಿಗೆ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ (ಜು.29)

ಸುದ್ದಿ360 ದಾವಣಗೆರೆ. ಜು.28: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮಾಗನೂರು ಬಸಪ್ಪ ಪ್ರತಿಷ್ಠಾನದ ವತಿಯಿಂದ 29ರ ಬೆಳಗ್ಗೆ 11ಕ್ಕೆ ನಗರದ ಕುವೆಂಪು ಕನ್ನಡ ಭವನದಲ್ಲಿ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ ಮಾಹಿತಿ ನೀಡಿದರು.

ಡಾ.ತೋಂಟದ ಸಿದ್ಧರಾಮ ಶ್ರೀ

ಇಂದು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಕಾರ್ಯಕ್ರಮದ ಸಾನಿಧ್ಯ ವಹಿಸಲಿರುವ ಗದಗ ತೋಂಟದಾರ್ಯ ಮಠದ ಡಾ.ತೋಂಟದ ಸಿದ್ಧರಾಮ ಶ್ರೀಗಳಿಗೆ ಈ ಬಾರಿ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸಮಾರಂಭದ ಅಧ್ಯಕ್ಷತೆಯನ್ನು ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನದ ಅಧ್ಯಕ್ಷ ಎಂ.ಬಿ.ಸಂಗಮೇಶ್ವರ ಗೌಡರು ವಹಿಸಿಕೊಳ್ಳಲಿದ್ದು, ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್‌ ಜೋಷಿ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಮಾಜಿ ಸಚಿವ ಎಸ್‌.ಎಸ್. ಪಾಟೀಲ್ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಾವಣಗೆರೆ ವಿವಿ ಕುಲಪತಿ ಪ್ರೊ ಬಸವರಾಜ್ ಡಿ.ಕುಂಬಾರ್, ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷ ಡಾ.ಹೆಚ್.ಎಸ್ ಮಂಜುನಾಥ್ ಕುರ್ಕಿ ಆಗಮಿಸಲಿದ್ದಾರೆ. ಜಿಲ್ಲಾ ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ ಎಂದು ತಿಳಿಸಿದರು. 2014ರಿಂದ ಈ ಪ್ರಶಸ್ತಿಯನ್ನು ನೀಡುತ್ತಾ ಬರಲಾಗಿದ್ದು, ಪ್ರಶಸ್ತಿಯು ಐವತ್ತು ಸಾವಿರ ನಗದು ಹಾಗೂ ಫಲಕ ಹೊಂದಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಕಸಾಪ ಗೌರವ ಕಾರ್ಯದರ್ಶಿ ಬಿ.ದಿಳ್ಳಪ್ಪ, ರೇವಣಸಿದ್ದಪ್ಪ ಅಂಗಡಿ, ಎಸ್.ಆರ್.ಶಿರಗುಂಬಿ ಇದ್ದರು.

Leave a Comment

error: Content is protected !!