ಜೂನ್ 16: ದಾವಣಗೆರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದಾವಣಗೆರೆ, ಜೂನ್ 14: ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇವರು ಜೂನ್ 16 ರಂದು ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಜೂನ್ 16 ರ ಬೆಳಿಗ್ಗೆ 9,30ಕ್ಕೆ ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು 10,20 ಕ್ಕೆ ದಾವಣಗೆರೆ ಜಿ.ಎಂ.ಐ.ಟಿ.ಹೆಲಿಪ್ಯಾಡ್ ತಲುಪಲಿದ್ದಾರೆ.

ಮಧ್ಯಾಹ್ನ 2.30 ರಿಂದ 4 ಗಂಟೆವರೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಜೆ 4 ಗಂಟೆಗೆ ಜಿ.ಎಂ.ಐ.ಟಿ ಹೆಲಿಪ್ಯಾಡ್ ನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Leave a Comment

error: Content is protected !!