ದಾವಣಗೆರೆ: ಇಸ್ಫೀಟ್ ಜೂಜಾಟದ ಮೇಲೆ ಪೊಲೀಸ್ ದಾಳಿ 14 ಜನರ ಬಂಧನ

ಸುದ್ದಿ360 ದಾವಣಗೆರೆ, ಆ.08: ಜಿಲ್ಲೆಯ ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿಂಭಾಗದ ಸಾರ್ವಜನಿಕ ಸ್ಥಳದಲ್ಲಿ ಭಾನುವಾರ (ಆ.7) ಕಾನೂನು ಬಾಹಿರವಾಗಿ ಇಸ್ಪೀಟ್ ಜೂಜಾಟ ಆಡುತ್ತಿದ್ದವರ ಮೇಲೆ ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಕನಿಕಾ ಸಿಕ್ರಿವಾಲ್ ರವರ ನೇತೃತ್ವದ  ಪೊಲೀಸ್ ತಂಡ ದಾಳಿನಡೆಸಿದೆ.

ಕಾನೂನು ಬಾಹಿರವಾಗಿ ಜೂಜಾಟದಲ್ಲಿ ತೊಡಗಿದ್ದ 14 ಜನರನ್ನು ಬಂಧಿಸಿದ್ದು, ಆರೋಪಿತರಿಂದ ಜೂಜಾಟದಲ್ಲಿ ತೊಡಗಿಸಿದ್ದ ಒಟ್ಟು  39,960 ರೂ.ಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಈ ಸಂಬಂಧ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

admin

admin

Leave a Reply

Your email address will not be published. Required fields are marked *

error: Content is protected !!