ಸುದ್ದಿ360 ದಾವಣಗೆರೆ, ಆ.26: ಗಣೇಶ ಚತುರ್ಥಿಯನ್ನು ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿಯಾಗಿ ಆಚರಿಸಲು ಸರ್ಕಾರದ ನಿರ್ದೇಶನವಿದ್ದು, ಗಣೇಶ ಮೂರ್ತಿ ತಯಾರಕರು ಹಾಗೂ ಸಾರ್ವಜನಿಕರು ಆಗಸ್ಟ್ 30 ರಂದು ಆಚರಿಸಲಿರುವ ಗಣೇಶ ಚತುರ್ಥಿಯನ್ನು ಈ ಕೆಳಕಂಡ ಮಾರ್ಗಸೂಚಿಗಳನ್ನು ಅನುಸರಿಸಬೇಕು.
ಗಣೇಶ ಮೂರ್ತಿಗಳನ್ನು ಜೇಡಿ ಮಣ್ಣಿನಿಂದ ತಯಾರಿಸಿ, ಬಣ್ಣರಹಿತ ಅಥವಾ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಮಾತ್ರ ಮಾರಾಟ ಮಾಡುಬೇಕು. ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ ಗಣೇಶ ಮೂರ್ತಿಗಳನ್ನು ತಯಾರಿಸಿ ಮಾರಾಟ ಮಾಡುವವರ ವಿರುದ್ಧ ಮಹಾನಗರಪಾಲಿಕೆ ಕಾಯ್ದೆ ರೀತ್ಯಾ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಳ್ಳಲಾಗುವುದು ಮತ್ತು ರೂ.10,000 ಗಳ ದಂಡ ವಿಧಿಸಲಾಗುವುದು. ಆದ್ದರಿಂದ ಯಾವುದೇ ಕಾರಣಕ್ಕೂ ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ ಗಣೇಶ ಮೂರ್ತಿಗಳನ್ನು ತಯಾರಿಸಿ ಮಾರಾಟ ಮಾಡಬಾರದೆಂದು ಸೂಚಿಸಲಾಗಿದೆ.
ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಖರೀದಿಸಬಾರದೆಂದು ಹಾಗು ಅರಿಶಿನದಿಂದ ಅಥವಾ ಜೇಡಿ ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಮಾತ್ರ ಖರೀದಿಸುವ ಮೂಲಕ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಮಾಡಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.