ಹೊರದೇಶಗಳಲ್ಲಿ ಉನ್ನತ ಶಿಕ್ಷಣ ಸೇರ ಬಯಸುವ ವಿದ್ಯಾರ್ಥಿಗಳಿಗೊಂದು ಸುವರ್ಣ ಅವಕಾಶ
ಸುದ್ದಿ360 ದಾವಣಗೆರೆ, ಆ.26: ನಗರದ ಜಿ ಎಂ ತಾಂತ್ರಿಕ ಮಹಾವಿದ್ಯಾಲಯವು ಇದೇ ಮೊದಲ ಬಾರಿ ಕೆಸಿ ಓವರ್ಸಿಸ್ ಎಜುಕೇಶನ್ ಚಿತ್ರದುರ್ಗ ಇವರ ಸಹಕಾರ ಮತ್ತು ಸಹಯೋಗದಲ್ಲಿ ಬೃಹತ್ ಅಂತರಾಷ್ಟ್ರೀಯ ಶಿಕ್ಷಣ ಮೇಳವನ್ನು ಆಯೋಜಿಸಿದ್ದು, ಬರುವ ಸೆಪ್ಟೆಂಬರ್ 3ರಂದು ಜಿಎಂಐಟಿ ಕೇಂದ್ರ ಗ್ರಂಥಾಲಯದಲ್ಲಿ ನೆರವೇರಲಿದೆ.
ಬೆಳಗ್ಗೆ 9:00ಯಿಂದ ಸಂಜೆ 5:00 ವರೆಗೆ ಕಾರ್ಯಕ್ರಮ ನಡೆಯಲಿದ್ದು, ಉದ್ಘಾಟನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಕೆಸಿ ಓವರ್ಸಿಸ್ ಎಜುಕೇಶನ್ ಸಂಯೋಜಕರುಗಳಾದ ಸವಿತಾ ಮತ್ತು ರೂಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಧ್ಯ ಕರ್ನಾಟಕ ಭಾಗದಲ್ಲೇ ಮೊದಲ ಬಾರಿ ಈ ಬೃಹತ್ ಅಂತರಾಷ್ಟ್ರೀಯ ಶಿಕ್ಷಣ ಮೇಳವನ್ನು ಹಮ್ಮಿಕೊಂಡಿದ್ದು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ. ಅನೇಕ ವಿದ್ಯಾರ್ಥಿಗಳಿಗೆ ವಿದೇಶ ಉನ್ನತ ಶಿಕ್ಷಣದ ಬಗ್ಗೆ ತಿಳಿಯುವ ಕುತೂಹಲ ಮತ್ತು ಸೇರ ಬಯಸುವ ಆಸಕ್ತಿ ಇದ್ದು, ಅಂತಹ ವಿದ್ಯಾರ್ಥಿಗಳಿಗೆ ಈ ಶಿಕ್ಷಣ ಮೇಳವು ಸಹಕಾರಿಯಾಗಲಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಮತ್ತು ಸಲಹೆ ಸೂಚನೆಗಳನ್ನು ಪಡೆಯಲು ಈಗಾಗಲೇ ನೋಂದಣಿಯು ಪ್ರಾರಂಭವಾಗಿದ್ದು, ಆಸಕ್ತಿಯುಳ್ಳ ವಿದ್ಯಾರ್ಥಿಗಳು ತಮ್ಮ ವಿವರಗಳನ್ನು ನೋಂದಾಯಿಸಲು ಈ ಕೆಳಗಿನ ಲಿಂಕ್ ಬಳಸಬೇಕಾಗಿ ಕೋರಲಾಗಿದೆ.https://www.studies-overseas.com/overseas-education-fair/gmit
ವಿವಿಧ ದೇಶದ ವಿಶ್ವವಿದ್ಯಾಲಯದ ತಜ್ಞರುಗಳು ಆಗಮಿಸಲಿದ್ದು ವಿದ್ಯಾರ್ಥಿಗಳಿಗೆ ಪ್ರವೇಶ ಶುಲ್ಕ, ಪ್ರವೇಶ ಪರೀಕ್ಷೆ, ಸ್ಕಾಲರ್ಶಿಪ್ ಇತ್ಯಾದಿ ವಿಷಯಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶವಿದ್ದು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೋರಲಾಗಿದೆ.