‘ಸಿ.ಟಿ. ರವಿ’ಯವರಿಗೆ ‘ಲೂಟಿ ರವಿ’ ಎಂದದ್ದು ಸಿದ್ಧರಾಮಯ್ಯರಲ್ಲ. . .

ಸುದ್ದಿ360 ದಾವಣಗೆರೆ, ಸೆ.13: ಸಿ .ಟಿ .ರವಿಯವರಿಗೆ ‘ಲೂಟಿ ರವಿ’ ಎಂಬ ಅನ್ವರ್ಥನಾಮ ಇಟ್ಟಿದ್ದು ಸಿದ್ದರಾಮಯ್ಯರಲ್ಲ. ಸ್ವತಃ ಅವರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೇ ರವಿಯವರನ್ನು ಲೂಟಿ ರವಿ ಎನ್ನುತ್ತಾರೆ. ಇದನ್ನು ಸಿದ್ದರಾಮಯ್ಯ‌ ಹೇಳಿದ್ದೇ ರವಿಯವರಿಗೆ ಚೇಳು ಕಡಿದಂತಾಗಿದೆ. ಹಾಗಾಗಿ ಸಿದ್ದರಾಮಯ್ಯರ ವಿರುದ್ಧ ಕೀಳು‌ ಪದಪ್ರಯೋಗ ಮಾಡಿ ರವಿ ತಮ್ಮ ಹೊಲಸು ನಾಲಗೆ ಪ್ರದರ್ಶಿಸಿದ್ದಾರೆ ಎಂದು ಯುವ ಕಾಂಗ್ರೆಸ್ ದಾವಣಗೆರೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಸಿಟಿ ರವಿಯವರ ಮಾತುಗಳನ್ನು ತೀವ್ರವಾಗಿ ಖಂಡಿಸಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯರ ಬಗ್ಗೆ ಅತ್ಯಂತ ತುಚ್ಛವಾಗಿ ಮಾತಾಡಿರುವ ಸಿ .ಟಿ .ರವಿ ತಮ್ಮ ಸಂಸ್ಕಾರವೇನು ಎಂಬುದನ್ನು ತೋರಿಸಿಕೊಂಡಿದ್ದಾರೆ ಎಂದು ಹೇಳಿರುವ ಅವರು, ಸಾರ್ವಜನಿಕ ಜೀವನದಲ್ಲಿರುವವರು ತಾವು ಬಳಸುವ ಭಾಷೆಯ ಮೇಲೆ ಹಿಡಿತವಿರಬೇಕು. ಸಿ .ಟಿ .ರವಿ ಸಾರ್ವಜನಿಕ ಜೀವನದಲ್ಲಿರುವವರು, ಜೊತೆಗೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ. ಈ ಸ್ಥಾನದ ಘನತೆಗೆ ತಕ್ಕ ಮಾತಾಡಲಿ ಎಂದು ಹೇಳಿದ್ದಾರೆ.

ಕೆಲವರಿಗೆ ದೊಡ್ಡವರನ್ನು ತೆಗಳಿ ದೊಡ್ಡವರೆನಿಸಿಕೊಳ್ಳುವ ಚಟವಿರುತ್ತದೆ. ಸಿ .ಟಿ .ರವಿಗೂ ಈ ಚಟವಿದೆ‌. ಸಿದ್ದರಾಮಯ್ಯರ ರಾಜಕೀಯ ಅನುಭವ, ಹಿರಿತನ ಮತ್ತು ಯೋಗ್ಯತೆ‌ ಈ ನಾಡಿಗೆ ತಿಳಿದಿದೆ. ಸಿದ್ದರಾಮಯ್ಯರ ಬಗ್ಗೆ ಕೀಳಾಗಿ ಮಾತಾಡುವ ರವಿ ತಮ್ಮ ಯೋಗ್ಯತೆಯೇನು ಎಂದು ಆತ್ಮವಿಮರ್ಶೆ ಮಾಡಿಕೊಳ್ಳಲಿ. ಪುಂಡು ಪೋಕರಿಯಂತೆ ಮಾತಾಡಿದರೆ ಗೌರವ ಉಳಿಯುವುದಿಲ್ಲ ಎಂದು ಸಿ.ಟಿ. ರವಿ ಅವರ ಮಾತನ್ನು ಮಹಬೂಬ್ ಭಾಷಾ ಖಂಡಿಸಿದ್ದಾರೆ.

Leave a Comment

error: Content is protected !!