ಸೆ.17: ವಿಶೇಷಚೇತನರಿಗೆ ಸಾಧಕನ ಸಲಕರಣೆ ವಿತರಣೆ

ದಾವಣಗೆರೆ: ದಿವ್ಯಾಂಗ ವ್ಯಕ್ತಿಗಳ ಕೌಶಲ್ಯ ಅಭಿವೃದ್ಧಿ ಮತ್ತು ಸಬಲೀಕರಣ ಇಲಾಖೆಯು ಕೇಂದ್ರ ಸರ್ಕಾರದ ಆಡಿಪ್ ಯೋಜನೆಯಡಿ ವಿಶೇಷಚೇತನರಿಗೆ ವಿವಿಧ ರೀತಿಯ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ನಾಳೆ (ಸೆ.17) ಬೆಳಗ್ಗೆ 11.30ಕ್ಕೆ ನಗರದ ಜಿಲ್ಲಾಧಿಕಾರಿ ‌ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಸಿಆರ್ ಸಿ ಕೇಂದ್ರದ ನಿರ್ದೇಶಕ ಡಾ.ಉಮಾಶಂಕರ ಮೋಹಂತಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು ವೇದಿಕೆ ಕಾರ್ಯಕ್ರಮಕ್ಕೂ ಮುಂಚಿತವಾಗಿ ಬೆಳಗ್ಗೆ 9.30 ರಿಂದ ಸಂಜೆ 5ರವರೆಗೆ ಸಾಧನ‌ಸಲಕರಣೆಗಳನ್ನು ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ವೇದಿಕೆ ಕಾರ್ಯಕ್ರಮಕ್ಕೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ, ಸಂಸದ ಜಿ.ಎಂ‌. ಸಿದ್ದೇಶ್ವರ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಪ್ರೊ.ಎನ್ ಲಿಂಗಣ್ಣ, ಎಸ್. ಆರ್. ರವೀಂದ್ರನಾಥ್, ಶಾಮನೂರು ಶಿವಶಂಕರಪ್ಪ, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಎಸ್ಪಿ ಸಿ.ಬಿ ರಿಷ್ಯಂತ್, ಜಿ.ಪಂ‌ ಸಿಇಓ ಡಾ.ಚನ್ನಪ್ಪ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಆಗಮಿಸಲಿದ್ದಾರೆ ಎಂದರು.

ಈ ಕಾರ್ಯಕ್ರಮದಲ್ಲಿ 180 ಟಿಎಲ್ಎಮ್ ಕಿಟ್ಗಳು, 72 ಜೋಡಿ ಶ್ರವಣ ಯಂತ್ರಗಳು, 5 ತ್ರಿಚಕ್ರ ಬೈಸಿಕಲ್ಗಳು ಸೇರಿದಂತೆ ಒಟ್ಟು 257 ಸಹಾಯಕ ಸಾಧನಗಳನ್ನು ವಿತರಿಸಲಾಗುತ್ತಿದ್ದು, ವಿಶೇಷಚೇತನರಿಗೆ 25,70,000 ಆಯೋಜಿಸಲಾಗಿದೆ ಎಂದರು. ಈ ಶಿಬಿರದಲ್ಲಿ ಫಲಾನುಭವಿಗಳ ಜೊತೆಗೆ ಸಹಾಯಕರು, ಸಿಬ್ಬಂದಿ ಸೇರಿ ಸುಮಾರು 600 ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಡಾ.ಜ್ಞಾನವೇಲ್  ಹಾಗೂ ಕನ್ನಗಸಭಾಪತಿ ಇದ್ದರು.

Leave a Comment

error: Content is protected !!