ವನ್ಯಜೀವಿ ಅಕ್ರಮ ಸಾಕಣೆ: ಎಸ್‌ಎಸ್ಎಂ ಬಂಧಿಸುವಂತೆ ಸಿಎಂ ಭೇಟಿಗೆ ಹೊರಟ ದಾವಣಗೆರೆ ಬಿಜೆಪಿ ನಿಯೋಗ

ಸುದ್ದಿ೩೬೦ ದಾವಣಗೆರೆ ಡಿ.೨೬: ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಒಡೆತನದ ಕಲ್ಲೇಶ್ವರ ರೈಸ್ ಮಿಲ್ ಮೇಲೆ ದಾಳಿ ನಡೆದು ೫ ದಿನಗಳು ಕಳೆದರೂ ಕೂಡ ತನಿಖೆ ಪ್ರಗತಿ ಕಂಡಿಲ್ಲ. ಅಪರಾಧಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿ ಉನ್ನತಮಟ್ಟದ ತನಿಖೆ ನಡೆಸುವಂತೆ ದಾವಣಗೆರೆ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಮನವಿ ಮಾಡಲು ನಿಯೋಗ ಬೆಳಗಾವಿಗೆ ತೆರಳಿದೆ.

ತನಿಖೆ ದಿಕ್ಕು ತಪ್ಪುತ್ತಿದೆ ಎಂದು ಆಕ್ರೋಶಗೊಂಡಿರುವ ಬಿಜೆಪಿ ಕಾರ್ಯಕರ್ತರು ಯಶವಂತರಾವ್ ಜಾಧವ್ ನೇತೃತ್ವದಲ್ಲಿ ಇಂದು ಬೆಳಗ್ಗೆ  ಯಶವಂತರಾವ್‌ ಜಾಧವ್ ನೇತೃತ್ವದಲ್ಲಿ ಮಹಾನಗರ ಪಾಲಿಕೆ ಸದಸ್ಯರು ದಾವಣಗೆರೆ ಹರಿಹರ ನಗರಾಭಿವೃದ್ಧಿ ಇಲಾಖೆಯ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಮಾಜಿ ಮೇಯ‌ರ್ ಸೇರಿದಂತೆ ಅನೇಕ ಮುಖಂಡರು ಸಿಎಂ ಬೇಟಿ ಮಾಡಿ ತನಿಖೆಗೆ ಒತ್ತಾಯಿಸಲಿದ್ದಾರೆ.

ಇಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಸಂಪುಟ ಸಭೆ ನಂತರ ಸಿಎಂ ಬಸವರಾಜ್ ಬೊಮ್ಮಾಯಿ ದಾವಣಗೆರೆ ಬಿಜೆಪಿ ನಿಯೋಗವನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Leave a Comment

error: Content is protected !!