ಐಎಸ್ ವಿಭಾಗಕ್ಕೆ 1 ಮತ್ತು ಬಿಟಿ ವಿಭಾಗಕ್ಕೆ 3 ರ‍್ಯಾಂಕ್‌ಗಳು
ಸುದ್ದಿ360 ದಾವಣಗೆರೆ, ಫೆ.26: ಬೆಳಗಾವಿಯ ವಿಶ್ವೇಶ್ವರಾಯ ಟೆಕ್ನಾಲಜಿಕಲ್ ಯೂನಿವರ್ಸಿಟಿ 2022ರ ಸಾಲಿನ ಇಂಜಿನಿಯರಿಂಗ್ ವಿಭಾಗದ ರ‍್ಯಾಂಕ್ ಗಳನ್ನು ಬಿಡುಗಡೆ ಮಾಡಿದ್ದು, ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಇಂಜಿನಿಯರಿಂಗ್ ವಿಭಾಗದಲ್ಲಿ ನಾಲ್ಕು ರ‍್ಯಾಂಕ್ ಗಳನ್ನು ಪಡೆದುಕೊಂಡಿದೆ.
ಇನ್ಫಾಫಾರ್ಮೆಶನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದಲ್ಲಿ ನಿಖಿತಾ ಎಚ್ ಬಿ ಆರನೇ ರ‍್ಯಾಂಕ್ ಪಡೆದಿದ್ದು, ಬಯೋಟೆಕ್ನಾಲಜಿ ಇಂಜಿನಿಯರಿಂಗ್ ವಿಭಾಗದಿಂದ ನಿವೇದಿತಾ ಬಿ ಎಂ, ಪಲ್ಲವಿ ಕೆಇ ಮತ್ತು ಭೂಮಿಕಾ ಕ್ರಮವಾಗಿ ನಾಲ್ಕನೇ, ಐದನೇ ಮತ್ತು ಏಳನೇ ರ‍್ಯಾಂಕ್ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಎಂಬಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಕಾಲೇಜಿನ ಚೇರ್ಮನ್ ಆದ ಜಿಎಂ ಲಿಂಗರಾಜು, ಆಡಳಿತ ಅಧಿಕಾರಿ ವೈ ಯು ಸುಭಾಷ್ ಚಂದ್ರ, ಕಾಲೇಜು ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಎಂಬಿ, ಡೀನ್ ಅಕಾಡೆಮಿಕ್ಸ್ ಮತ್ತು ಐ ಎಸ್ ವಿಭಾಗದ ಮುಖ್ಯಸ್ಥರಾದ ಡಾ ಸುನಿಲ್ ಕುಮಾರ್ ಬಿಎಸ್, ಬಯೋಟೆಕ್ನಾಲಜಿ ವಿಭಾಗದ ಮುಖ್ಯಸ್ಥರಾದ ಡಾ ಪ್ರಕಾಶ್, ಎಲ್ಲಾ ವಿಭಾಗದ ಮುಖ್ಯಸ್ಥರುಗಳು ಮತ್ತು ಪ್ರಾಧ್ಯಾಪಕ ವರ್ಗದವರು ಅಭಿನಂದನೆಗಳನ್ನು ತಿಳಿಸಿದ್ದಾರೆ.