ಬೆಂಗಳೂರು- ಮೈಸೂರು ಟೋಲ್ – ಡಿ.ಕೆ.ಶಿ ರಾಜಕಾರಣ: ಸಿಎಂ ಬೊಮ್ಮಾಯಿ

ಜನಸಾಮಾನ್ಯರ ತಕರಾರಿಲ್ಲ – ಬಹಳಷ್ಟು ಸೇವೆ ಸರ್ವಿಸ್ ರಸ್ತೆಯಲ್ಲೇ ಲಭ್ಯ – ಅಲ್ಲೆಲ್ಲೂ ಟೋಲ್ ಇಲ್ಲ

ಬೆಂಗಳೂರು, ಮಾರ್ಚ್ 16 : ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಟೋಲ್ ಸಂಗ್ರಹದ ಬಗ್ಗೆ ತಕರಾರು ಜನಸಾಮಾನ್ಯರದ್ದಲ್ಲ, ಕೆಪಿಸಿಸಿ  ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜಕಾರಣ ಮಾಡುತ್ತಿದ್ದಾರೆ. ಅವರು ಬಳಸುವ ಭಾಷೆ, ನಡೆದುಕೊಂಡ  ರೀತಿ ಯಾವುದೇ ಕನ್ನಡಿಗರಿಗೆ ಶೋಭೆ ತರುವಂಥದ್ದಲ್ಲ ಎಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಟೋಲ್ ಸಂಗ್ರಹದ ಬಗ್ಗೆ ತಮ್ಮ ನಿವಾಸದ ಬಳಿ ಇಂದು  ಮಾಧ್ಯಮದವರಿಗೆ  ಪ್ರತಿಕ್ರಿಯೆ ನೀಡಿದರು.

ರಾಷ್ಟ್ರೀಯ ಹೆದ್ದಾರಿ ಬರುವ ಮುನ್ನವೂ ಟೋಲ್ ಸಂಗ್ರಹವಾಗುತ್ತದೆ ಎನ್ನುವುದು ಎಲ್ಲರಿಗೂ ತಿಳಿದಿದೆ. ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಬಹಳಷ್ಟು ಸೇವೆಗಳು ಸರ್ವಿಸ್ ರಸ್ತೆಯಲ್ಲಿಯೇ ಇದೆ. ಅಲ್ಲೆಲ್ಲೂ ಟೋಲ್ ಇಲ್ಲ. ವಿನಾ ಕಾರಣ ರಾಜಕಾರಣವಾಗುತ್ತಿದೆ ಎಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಹೇಳಿದರು.

Leave a Comment

error: Content is protected !!