ಮಾ.17 – ಅಪ್ಪು ಹುಟ್ಟುಹಬ್ಬ: ದುರ್ಗಾದೇವಿಗೆ ವಿಶೇಷ ಪೂಜೆ

ಡಾ. ಪುನೀತ್ ರಾಜ್‌ಕುಮಾರ್ ಪುತ್ಥಳಿಗಾಗಿ ಮಹಾನಗರ ಪಾಲಿಕೆಗೆ ಮನವಿ

ಸುದ್ದಿ360 ದಾವನಗೆರೆ ಮಾ. 16: ಕರ್ನಾಟಕ ರತ್ನ ಪುರಸ್ಕೃತ, ಅಭಿಮಾನಿಗಳ ಮನದಲ್ಲಿ ಸದಾ ನೆಲೆಸಿರುವ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ಅಪ್ಪು ಅಭಿಮಾನಿಗಳ ಬಳಗದಿಂದ ಮಾ.17ರಂದು ದುರ್ಗಾಂಬಿಕ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸೇರಿದಂತೆ ಹಲವು ಕರ‍್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಅಪ್ಪು ಅಭಿಮಾನಿ ಶಂಕರ್ ಶಿರೇಕರ್ ಪವರ್ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 8 ಗಂಟೆಗೆ ದುರ್ಗಾದೇವಿಗೆ ಪೂಜೆ ಸಲ್ಲಿಸಿ, ನಂತರ 11 ಗಂಟೆಗೆ ಅಭಿಮಾನಿಗಳೆಲ್ಲರೂ ಮಹಾನಗರ ಪಾಲಿಕೆಗೆ ತೆರಳಿ ಡಾ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪುತ್ಥಳಿ ನರ‍್ಮಾಣಕ್ಕಾಗಿ ಮನವಿ ಸಲ್ಲಿಸಲಾಗುವುದು. ಸಾರ್ವಜನಿಕರು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಗವಹಿಸಬೇಕಾಗಿ ನಗರದ ಕೊಂಡಜ್ಜಿ ರಸ್ತೆಯ ಸಿದ್ಧಗಂಗಾ ಶ್ರೀ ಡಾ| ಶಿವಕುಮಾರ ಸ್ವಾಮೀಜಿ ಸರ್ಕಲ್ ಗೆಳೆಯರ ಬಳಗದ ಪರವಾಗಿ ಶಂಕರ್ ತಿಳಿಸಿದ್ದಾರೆ.

ಹಾಗೆಯೇ ಏಪ್ರಿಲ್ 1 ರಂದು ಶ್ರೀ ಸಿದ್ಧಗಂಗಾ ಶ್ರೀಗಳ ಹುಟ್ಟುಹಬ್ಬವೂ ಇದ್ದು ಯರಗುಂಟೆಯ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

error: Content is protected !!