ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ‌‌ ಜೈನಭಟ್ಟಾರಕ ಸ್ವಾಮೀಜಿ ವಿಧಿವಶ – ಸರ್ಕಾರಿ ಗೌರವಗಳೊಂದಿಗೆ ಶ್ರೀಗಳ ಅಂತ್ಯಕ್ರಿಯೆ : ಸಿಎಂ ಬೊಮ್ಮಾಯಿ

ಸುದ್ದಿ360 ಹಾಸನ ಮಾ. 23: ಜೈನ‌ಕಾಶಿ ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ‌‌ ಜೈನಭಟ್ಟಾರಕ ಸ್ವಾಮೀಜಿ ಅವರು ಇಂದು (ಮಾ.23) ವಿಧಿವಶರಾಗಿದ್ದಾರೆ.

ಕಳೆದ ಮುರ್ನಾಲ್ಕು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳನ್ನು ಶ್ರವಣಬೆಳಗೊಳ ಮಠದಲ್ಲೇ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.ಹೆಚ್ಚಿನ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಸ್ವಸ್ತಿ ಶ್ರೀ ಚಾರುಕೀರ್ತಿ ಬಿರುದಾಂಕಿತ ಜೈನಭಟ್ಟಾರಕ ಸ್ವಾಮೀಜಿಗಳು ದೇಶಾದ್ಯಂತ ಅಪಾರ ಭಕ್ತವರ್ಗವನ್ನು ಹೊಂದಿದ್ದಾರೆ.

ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ: ಸಿಎಂ ಬೊಮ್ಮಾಯಿ

ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ  ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ತೀವ್ರ ಸಂತಾಪ

“ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ  ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ನಮ್ಮನ್ನಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಪೂಜ್ಯರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಅಪಾರ ಸಂಖ್ಯೆಯ ಭಕ್ತರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

admin

admin

Leave a Reply

Your email address will not be published. Required fields are marked *

error: Content is protected !!