ಏ.8ಕ್ಕೆ ಬಿಜೆಪಿ ಅಂತಿಮ ಪಟ್ಟಿ : ಬೊಮ್ಮಾಯಿ

ಬೆಂಗಳೂರು, ಏ. 03: ಪಕ್ಷದ ಮೊದಲ ಪಟ್ಟಿಯ ಬಗ್ಗೆ ಕ್ಷೇತ್ರದಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ.  ಜಿಲ್ಲಾವಾರು ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಗಿದ್ದು ನಾಳೆ ಮತ್ತು ನಾಡಿದ್ದು ರಾಜ್ಯಮಟ್ಟದ ಕೋರ್ ಕಮಿಟಿ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ವೇಳೆಯಲ್ಲಿ ಮಾತನಾಡಿದ ಅವರು, ರಾಜ್ಯಮಟ್ಟದ ಕೋರ್ ಕಮಿಟಿ ಸಭೆಯ ನಂತರ ಕೇಂದ್ರ ಸಂಸದೀಯ ಮಂಡಳಿ ಸಭೆ ನಡೆಯಲಿದೆ.  ಬಹುತೇಕವಾಗಿ ಏಪ್ರಿಲ್  8 ರಂದು ಸಂಸದೀಯ ಮಂಡಳಿಯಲ್ಲಿ ಪಟ್ಟಿ ಅಂತಿಮಗೊಳ್ಳಲಿದೆ ಎಂದಿದ್ದಾರೆ.

Leave a Comment

error: Content is protected !!