ಶಿವಮೊಗ್ಗ: ಏ.10ರಂದು ಚೆಕ್ ಪೋಸ್ಟ್ ಗಳಲ್ಲಿ ಸಿಕ್ಕಿದ್ದು 30.60 ಲಕ್ಷ ನಗದು

ಶಿವಮೊಗ್ಗ,ಏ.11: ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆ ನಡೆಸಲಾಗುತ್ತಿದ್ದು, ಏ.10ರಂದು ಮೂರು ಪ್ರತ್ಯೇಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಒಟ್ಟು ರೂ 30,64,000/- ನಗದು ಹಣವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ.

ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ ರೂ 27,60,000/- ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ ರೂ 1,79,000/- ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ ರೂ 1,25,000/- ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

admin

admin

Leave a Reply

Your email address will not be published. Required fields are marked *

error: Content is protected !!