ದಾವಣಗೆರೆ ದಕ್ಷಿಣ ಪಕ್ಷೇತರ ಅಭ್ಯರ್ಥಿ ಎಂ. ಬಿ. ಪ್ರಕಾಶ್‍ ನಾಮಪತ್ರ ವಾಪಸ್ – ಕಾಂಗ್ರೆಸ್‍ಗೆ ಬೆಂಬಲ

ಸುದ್ದಿ360 ದಾವಣಗೆರೆ, ಏ.25: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿ ಸಲ್ಲಿಸಿದ್ದ ನಾಮಪತ್ರವನ್ನು ಹಿಂಪಡೆದಿರುವುದಾಗಿ ಎಂ.ಬಿ. ಪ್ರಕಾಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನಾಗಿ ಕೆಲಸ ನಿರ್ವಹಿಸಿರುವ ನಾನು  ಹಲವು ವರ್ಷಗಳಿಂದ ಬಿಜೆಪಿಯಲ್ಲಿ ಕೆಲಸ ಮಾಡಿದ್ದೇನೆ. ದಾವಣಗೆರೆಯನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸುವ ಪಣ ತೊಟ್ಟಿರುವ ಶಾಮನೂರು ಶಿವಶಂಕರಪ್ಪ ಮತ್ತು ಎಸ್ ಎಸ್. ಮಲ್ಲಿಕಾರ್ಜುನ್ ಅವರನ್ನು ಬೆಂಬಲಿಸಿ ನನ್ನ ನಾಮಪತ್ರ ವಾಪಸ್ ಪಡೆದು ಚುನಾವಣೆಯಲ್ಲಿ ಕಾಂಗ್ರೆಸ್ನ ಈ ಇಬ್ಬರು ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುವುದಾಗಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್‍ ಕೆ. ಶೆಟ್ಟಿ, ಬ್ಲಾಕ್ ಕಾಂಗ್ರೆಸ್‍ ಅಧ್ಯಕ್ಷ ಕೆ.ಜಿ. ಶಿವಕುಮಾರ್‍, ರಾಘವೇಂದ್ರ ಗೌಡ, ನಾಗರಾಜ್‍, ದಯಾನಂದ್‍, ಹುಲಿಕಟ್ಟೆ ರಾಜೇಶ್‍ ಇತರರು ಇದ್ದರು.

Leave a Comment

error: Content is protected !!