ದಶಪಥ ಹೆದ್ದಾರಿಯಲ್ಲಿ ದುಬಾರಿ ಸಂಚಾರ – ಪ್ರಯಾಣಿಕರ ಜೇಬಿಗೆ ಕತ್ತರಿ – ಯಾವ ವಾಹನಕ್ಕೆ ಎಷ್ಟು?

ಸುದ್ದಿ360 ರಾಮನಗರ: ದಶಪಥ ಹೆದ್ದಾರಿಯಲ್ಲಿ ಸಂಚಾರ ಮತ್ತಷ್ಟು ದುಬಾರಿಯಾಗಿದ್ದು, ಎಕ್ಸ್‌ಪ್ರೆಸ್‌ ಟೋಲ್ ದರ ಸದ್ದಿಲ್ಲದೇ  ಹೆಚ್ಚಾಗಿದೆ.

ಈ ಹಿಂದೆ ಏ.1ರಂದೇ ದರ ಏರಿಕೆ ಮಾಡಿದ್ದ ಹೆದ್ದಾರಿ ಪ್ರಾಧಿಕಾರ ಸಾರ್ವಜನಿಕ ಆಕ್ರೋಶದ ಹಿನ್ನಲೆಯಲ್ಲಿ ದರ ಹೆಚ್ಚಳ ವಾಪಸ್ಸ್ ಪಡೆದಿತ್ತು. ಇದೀಗ ಮತ್ತೆ ಟೋಲ್ ದರ ಏರಿಕೆ ಮಾಡಿದೆ. ಶೇ.22ರಷ್ಟು ಟೋಲ್ ದರ ಏರಿಕೆ ಮಾಡಿರೋ ಹೆದ್ದಾರಿ ಪ್ರಾಧಿಕಾರ ಜೂನ್ 1ರಿಂದಲೇ ದುಬಾರಿ ಶುಲ್ಕ ವಸೂಲಿ ಮಾಡುತ್ತಿದೆ.

ಪ್ರಯಾಣಿಕರ ಜೇಬಿಗೆ ಕತ್ತರಿ

ಫಾಸ್ಟ್ ಟ್ಯಾಗ್ ಇರೋ ಕಾರಣ ವಾಹನ ಸವಾರರ ಗಮನಕ್ಕೂ ಬಾರದೇ ಹಣ ವಸೂಲಿಯಾಗುತ್ತಿದ್ದು,  ಕಾರ್, ವ್ಯಾನ್‌, ಜೀಪ್‌ಗಳ ಏಕಮುಖ ಸಂಚಾರಕ್ಕೆ ₹135 ರಿಂದ ₹165ಕ್ಕೆ ಏರಿಕೆ (30 ರೂ ಹೆಚ್ಚಳ). ಲಘು ವಾಹನಗಳು, ಮಿನಿ ಬಸ್‌ಗಳ ಏಕಮುಖ ಟೋಲ್‌ ₹220ರಿಂದ ₹270ಕ್ಕೆ ಏರಿಕೆ(50ರೂ ಹೆಚ್ಚಳ). ಟ್ರಕ್‌, ಬಸ್, 2 ಆಕ್ಸೆಲ್‌ ವಾಹನಗಳ ಏಕಮುಖ ಸಂಚಾರಕ್ಕೆ ₹460 ರಿಂದ ₹565ಕ್ಕೆ ಏರಿಕೆ.(105 ಹೆಚ್ಚಳ). 3 ಆಕ್ಸೆಲ್ ವಾಣಿಜ್ಯ ವಾಹನಗಳ ಏಕಮುಖ ಸಂಚಾರ ₹ 500 ರಿಂದ ₹615ಕ್ಕೆ ಏರಿಕೆ (115 ರೂ ಹೆಚ್ಚಳ). ಭಾರಿ ವಾಹನಗಳ ಏಕಮುಖ ಸಂಚಾರ ₹ 720ರಿಂದ ₹885ಕ್ಕೆ ಏರಿಕೆ (165 ಹೆಚ್ಚಳ). 7 ಅಥವಾ ಅದಕ್ಕಿಂತ ಹೆಚ್ಚಿನ ಆಕ್ಸೆಲ್‌ ವಾಹನಗಳ ಎಕಮುಖ ಸಂಚಾರ ₹880ರಿಂದ  ₹1,080ಕ್ಕೆ ಏರಿಕೆ (₹200 ಹೆಚ್ಚಳ) ಆಗಿದೆ.

Leave a Comment

error: Content is protected !!