ಪ್ರತಿಭಾ ಪುರಸ್ಕಾರ: ಗಂಗಾಮತಸ್ಥರ ಸಂಘದಿಂದ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ: ಜಿಲ್ಲಾ ಗಂಗಾಮತಸ್ಥರ (ಬೆಸ್ತರ ) ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಸಮಾಜದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಕಳೆದ ಸಾಲಿನಲ್ಲಿ  ವೈದ್ಯಕೀಯ ಇಂಜಿನಿಯರಿಂಗ್ ಪ್ರವೇಶ ಪಡೆದಿರುವ,  ಪ್ರಸಕ್ತ ಸಾಲಿನ ಪಿಯುಸಿ ಮತ್ತು ಎಸ್ಎಸ್ಎಲ್ ಸಿ, ತರಗತಿಗಳಲ್ಲಿ, ಶೇಕಡ 75ಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು.

ಅರ್ಹ ವಿದ್ಯಾರ್ಥಿಗಳು ದಿನಾಂಕ 15.06.2023ರ ಬೆಳಗ್ಗೆ 10:30 ರಿಂದ ಸಂಜೆ 5:50 ಗಂಟೆಯವರೆಗೆ ಸ್ವ ವಿವರಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಅರ್ಜಿಯೊಂದಿಗೆ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ನಕಲು ಪ್ರತಿ ಮತ್ತು ಭಾವಚಿತ್ರದೊಂದಿಗೆ,  ಶಾಮನೂರು ರಸ್ತೆ  ಆಶ್ರಯ ಆಸ್ಪತ್ರೆ ಪಕ್ಕದಲ್ಲಿರುವ ಜಿಲ್ಲಾ ಸಂಘದ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ. ಗ್ರಾಮೀಣ ಪ್ರದೇಶದ ರೈತರ ಮಕ್ಕಳಿಗೆ ವಿಶೇಷ ಪುರಸ್ಕಾರ ನೀಡಲಾಗುವುದು ಅರ್ಜಿಯನ್ನು  ಜೂನ್ 30ನೇ ತಾರೀಖಿನೊಳಗೆ ಸಲ್ಲಿಸಬೇಕು. ಕಾರ್ಯಕ್ರಮದ ಸ್ಥಳ ಮತ್ತು ದಿನಾಂಕ ನಂತರ  ತಿಳಿಸಲಾಗುವುದು  ಎಂದು ಸಮಾಜದ ಪ್ರಧಾನ ಕಾರ್ಯದರ್ಶಿಯಾದ ಉಮೇಶ್ ಜೆ ವಕೀಲರು ತಿಳಿಸಿದ್ದಾರೆ.

ಹೆಚ್ಚಿನ ವಿವರಗಳಿಗಾಗಿ ಸಂಪರ್ಕ ಸಂಖ್ಯೆ 9945858010, 7892858978, 7676716770 ಇವುಗಳನ್ನು ಸಂಪರ್ಕಿಸಬಹುದಾಗಿದೆ.

Leave a Comment

error: Content is protected !!