ಸುದ್ದಿ360 ಬೆಂಗಳೂರು, ಜೂ.19: ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾತನಾಡಿ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಸ್ವಾಮೀಜಿ ಗಳು ನೀಡಿರುವ ಮನವಿಯನ್ನು ತರಿಸಿಕೊಂಡು ಏನೆಲ್ಲಾ ಬದಲಾವಣೆ ಮಾಡಬೇಕೋ ಅದನ್ನು ಮುಕ್ತ ಮನಸ್ಸಿನಿಂದ ಕೈಗೊಳ್ಳಲಾಗುವುದು. ಇದನ್ನು ಪ್ರತಿಷ್ಠೆ ಎಂದು ಪರಿಗಣಿಸಿಲ್ಲ. ಪಠ್ಯದ ಕುರಿತು ಆಕ್ಷೇಪವಿದ್ದರೆ, ಅದನ್ನು ನಿವಾರಿಸಲು ಸಿದ್ಧರಿದ್ದೇವೆ.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಭಾರತ ಹಾಗೂ ಕರ್ನಾಟಕ ಕಟ್ಟಲು ಶ್ರಮಿಸಿರುವ ಹಿರಿಯರು, ರಾಜಮಹಾರಾಜರು, ಸಾಹಿತಿಗಳು, ಕಲಾಕಾರರು, ಜ್ಞಾನಪೀಠ ವಿಜೇತರ ಬಗ್ಗೆ ಅಪಾರ ಗೌರವವಿದೆ. ಯಾವುದೇ ಕಾರಣಕ್ಕಾಗಿ ಅವರಿಗೆ ನೀಡುವ ಗೌರವದಲ್ಲಿ ರಾಜಿ ಮಾಡಿಕೊಳ್ಳಲು ಸರ್ಕಾರ ಸಿದ್ದವಿಲ್ಲ. ಅವರ ಗೌರವ ಉಳಿಸಲು ಹಾಗೂ ಮುಂದಿನ ಜನಾಂಗಕ್ಕೆ ಅವರ ಬಗ್ಗೆ ತಿಳಿಸಲು ಯಾವುದೇ ಮಟ್ಟಕ್ಕೊ ಹೋಗಲು ತಯಾರು ಎಂದರು.
ಪ್ರಧಾನಿ ಭೇಟಿಗೆ ಸಕಲ ಸಿದ್ಧತೆ
ಪ್ರಧಾನಮಂತ್ರಿಗಳ ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.