ಸಿಇಟಿ / ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ; ತಜ್ಞರೊಂದಿಗೆ ವಿಶೇಷ ಸಂವಾದ

cet comed-k seminar shimoga jnnce college

ಶಿವಮೊಗ್ಗ ಜೆಎನ್‍ಎನ್‍ಇ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮ. ವಿವಿಧ ಎಂಜಿನಿಯರಿಂಗ್‌ ವಿಭಾಗಗಳ ಪರಿಚಯ, ಉದ್ಯೋಗವಕಾಶಗಳು, ವಿವಿಧ ವಿದ್ಯಾರ್ಥಿ ವೇತನಗಳ ಕುರಿತಾಗಿ ತಜ್ಞರಿಂದ ಮಾಹಿತಿ

ಸುದ್ದಿ360 ಶಿವಮೊಗ್ಗ: ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ಕುರಿತು ನಗರದ ಜೆಎನ್‌ಎನ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಜು.09 ರ ಭಾನುವಾರದಂದು ಶಿಕ್ಷಣ ತಜ್ಞರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಅಂದು ಬೆಳಗ್ಗೆ 11:00 ಗಂಟೆಗೆ ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆಯನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಲಾಗುತ್ತದೆ. ಜೊತೆಯಲ್ಲಿ ವಿವಿಧ ಎಂಜಿನಿಯರಿಂಗ್‌ ವಿಭಾಗಗಳ ಪರಿಚಯ, ಉದ್ಯೋಗವಕಾಶಗಳು, ವಿವಿಧ ವಿದ್ಯಾರ್ಥಿ ವೇತನಗಳ ಕುರಿತಾಗಿ ತಜ್ಞರು ಮಾಹಿತಿ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಬಹುದಾಗಿದ್ದು, ಭಾಗವಹಿಸುವವರಿಗೆ ಬೆಳಿಗ್ಗೆ 10:30ಕ್ಕೆ ಮಹಾವೀರ ಸರ್ಕಲ್ ನಿಂದ ಕಾಲೇಜಿಗೆ ವಿಶೇಷ ಬಸ್ ಸೌಲಭ್ಯವಿದೆ. ಆಸಕ್ತರು ಇದರ ಸದುಪಯೋಗಪಡಿಸಿಕೊಳ್ಳುವಂತೆ ಮತ್ತು ಹೆಚ್ಚಿನ ಮಾಹಿತಿಗಾಗಿ ಮೊ.ಸಂಖ್ಯೆ: 9632471667 ಸಂಪರ್ಕಿಸಲು ಪತ್ರಿಕಾ ಪ್ರಕಟಣೆಯಲ್ಲಿ ಕೋರಲಾಗಿದೆ.

admin

admin

Leave a Reply

Your email address will not be published. Required fields are marked *

error: Content is protected !!