ಸುದ್ದಿ360, ದಾವಣಗೆರೆ: ಹಣದ ಆಮಿಷ ಒಡ್ಡಿ ಹೆಣ್ಣುಮಕ್ಕಳನ್ನು ಕರೆಯಿಸಿಕೊಂಡು ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಪಿಜೆ ಬಡಾವಣೆಯ 3ನೇ ಮೇನ್ ನಲ್ಲಿರುವ 2ನೇ ಮಹಡಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದರ ಖಚಿತ ಮಾಹಿತಿ ಮೇರೆಗೆ ಜು.10ರ ಸೋಮವಾರ ಸಂಜೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಹಾಗೂ ಉಪವಿಭಾಗ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾನಗರ ಪಿಐ ರವರು ಮಹಿಳಾ ಪೊಲೀಸ್ ಠಾಣೆಯ ಪಿ.ಎಸ್.ಐ ಮತ್ತು ಬಡಾವಣೆ ಪಿಎಸ್ಐ ಹಾಗೂ ಸಿಬ್ಬಂದಿಯವರನ್ನೊಳಗೊಂಡ ತಂಡ ಸ್ಥಳದ ಮೇಲೆ ದಾಳಿ ನಡೆಸಿದೆ.
ಸ್ಥಳವನ್ನು ಬಾಡಿಗೆಗೆ ಪಡೆದು ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿರುವುದು ಕಂಡುಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆಯನ್ನು ಬಂಧಿಸಲಾಗಿದೆ. ಆರೋಪಿತರ ಬಳಿ ಒಟ್ಟು 35,100 ರೂ. ನಗದು ದೊರೆತಿದೆ. ಈ ಕುರಿತು ದಾವಣಗೆರೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
(ಸಾಂದರ್ಭಿಕ ಚಿತ್ರ)