ಭಾರತ್ ಜೋಡೋ ಯಾತ್ರೆಯ ಮೊದಲ ವಾರ್ಷಿಕೋತ್ಸವ ಪಾದಯಾತ್ರೆಯಲ್ಲಿ ಡಾ. ಪ್ರಭಾ ಮಲ್ಲಿಕಾರ್ಜುನ್

ಸುದ್ದಿ360, ದಾವಣಗೆರೆ, ಸೆ.7: ಎಐಸಿಸಿ ನಿಕಟಪೂರ್ವ ಅಧ್ಯಕ್ಷರಾದ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ 2022ರ ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಆರಂಭವಾದ ಭಾರತ್ ಜೋಡೋ ಯಾತ್ರೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಬಿ.ಮಂಜಪ್ಪನವರ ನೇತೃತ್ವದಲ್ಲಿ ದಾವಣಗೆರೆ ನಗರದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.

ಈ ಪಾದಯಾತ್ರೆಯನ್ನು ಡಾ. ಪ್ರಭ ಮಲ್ಲಿಕಾರ್ಜುನ್ ಉದ್ಘಾಟನೆ ಮಾಡುವ ಮೂಲಕ ಪಕ್ಷದ ಕಾರ್ಯಕರ್ತರಿಗೆ ಭಾರತ್ ಜೋಡೋ ಯಾತ್ರೆಯ ಮೊದಲ ವರ್ಷದ ವಾರ್ಷಿಕೋತ್ಸವದ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಜಗಳೂರು ಶಾಸಕ ಬಿ ದೇವೇಂದ್ರಪ್ಪ, ಕೆಪಿಸಿಸಿ ಸದಸ್ಯರಾದ ಕಲ್ಲೇಶ್ ರಾಜ್ ಪಾಟೀಲ್, ರೇವಣಸಿದ್ದಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ, ಎಸ್. ಮಲ್ಲಿಕಾರ್ಜುನ್, ಎ ನಾಗರಾಜ್, ಮೇಯರ್ ವಿನಾಯಕ್ ಪೈಲ್ವಾನ್, ಪಾಲಿಕೆ ಸದಸ್ಯರಾದ ಗಡಿಗುಡಾಳ್ ಮಂಜುನಾಥ್, ಚಮನ್ ಸಾಬ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಯೂಬ್ ಪೈಲ್ವಾನ್, ಕೆ.ಜಿ ಶಿವಕುಮಾರ್, ಅಬಿದ್ ಅಲಿ, ಮೊಹಮ್ಮದ್ ಜಬಿವುಲ್ಲಾ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಅನಿತ ಬಾಯಿ ಮಾಲತೇಶ್, ಸುಷ್ಮಾ ಪಾಟೀಲ್, ಕೆ.ಎಲ್.ಹರೀಶ್ ಬಸಾಪುರ ಸೇರಿದಂತೆ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

Leave a Comment

error: Content is protected !!