ಸುದ್ದಿ360 ದಾವಣಗೆರೆ, ಸೆ. 21: ಫೋಟೋಗ್ರಾಫರ್ಸ್ ಯೂತ್ ವೆಲ್‌ಫೇರ್ ಅಸೋಸಿಯೇಷನ್ (Photographers welfare association)ವತಿಯಿಂದ ನಗರದ ಪಿಬಿ ರಸ್ತೆಯ ಕಮ್ಮವಾರಿ ಸಮುದಾಯ ಭವನದಲ್ಲಿ ಸೆ.23ರಂದು ವಿಶ್ವ ಛಾಯಾಗ್ರಾಹಣ ದಿನಾಚರಣೆ (World Photography Day) ಮತ್ತು ದೇವನಗರಿ ಎಕ್ಸ್ಪೋ-23 (Expo-23) ಕಾರ್ಯಕ್ರಮ ಏರ್ಪಡಿಸಲಾಗಿದೆ.
ಜಿಲ್ಲಾ ವರದಿಗಾರರ ಕೂಟದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಅಸೋಸಿಯೇಷನ್ ಅಧ್ಯಕ್ಷ ಶ್ರೀನಾಥ್ ಪಿ. ಅಗಡಿ ಮಾಹಿತಿ ನೀಡಿದರು. ಸೆ.23ರ ಭಾನುವಾರ ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್, ಕರ್ನಾಟಕ ರಾಜ್ಯ ವೃತ್ತಿಪರ ಛಾಯಾಗ್ರಾಹಕರ ಸಂಘಗಳ ಒಕ್ಕೂಟದ ಅಧ್ಯಕ್ಷ ವಿಲ್ಸನ್ ಗೊನ್ಸಾಲ್ವಿಸ್, ಕರ್ನಾಟಕ ಛಾಯಾಗ್ರಾಹಕರ ಸಂಘದ ಉಪಾಧ್ಯಕ್ಷ ಎಚ್.ಎಸ್. ನಾಗೇಶ್, ಧೂಡಾ ಮಾಜಿ ಅಧ್ಯಕ್ಷ ದೇವರಮನಿ ಶಿವಕುಮಾರ್, ಜಿಲ್ಲಾ ಫೋಟೋಗ್ರಾಫರ್ಸ್ ಮತ್ತು ವಿಡಿಯೋಗ್ರಾಫರ್ಸ್ ಸಂಘದ ಅಧ್ಯಕ್ಷ ವಿಜಯಕುಮಾರ್ ಜಾಧವ್, ಎಸ್.ಆರ್. ತಿಪ್ಪೇಸ್ವಾಮಿ, ಎಸ್. ದುಗ್ಗಪ್ಪ ಭಾಗವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾವು ವಹಿಸಿಕೊಳ್ಳಲಿರುವುದಾಗಿ ತಿಳಿಸಿದರು.
ಅಂದು ಬೆಳಗ್ಗೆ 9 ಗಂಟೆಗೆ ನುರಿತ ತಜ್ಞರಿಂದ ಕಾರ್ಯಾಗಾರ ನಡೆಯಲಿದೆ. ಹಿರಿಯ ಛಾಯಾಗ್ರಾಹಕರಾದ ಸುರಭಿ ಶಿವಮೂರ್ತಿ, ಪಿ.ಎಸ್. ರವಿ ಸೇರಿದಂತೆ ಛಾಯಾ ಸಾಧಕರನ್ನು ಸನ್ಮಾನಿಸಲಾಗುವುದು. ಛಾಯಾಗ್ರಾಹಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಫೋಟೋ ಮತ್ತು ವಿಡಿಯೋ ಕ್ಯಾಮರಾಗಳ ಉಚಿತ ತಪಾಸಣೆ ನಡೆಯಲಿದೆ. ಸಂಜೆ 6 ಗಂಟೆಗೆ ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಎಸ್.ಎಸ್. ಕೇರ್ ಟ್ರಸ್ಟ್‍ನ ಟ್ರಸ್ಟಿ ಡಾ. ಪ್ರಭಾ ಮಲ್ಲಿಕಾರ್ಜುನ್ ಮತ್ತಿತರರು ಭಾಗವಹಿಸುವರು” ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಅಸೋಸಿಯೇಷನ್ ಉಪಾಧ್ಯಕ್ಷರಾದ ಎಸ್.ಆರ್. ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿ ಎಸ್. ದುಗ್ಗಪ್ಪ, ಸಹ ಕಾರ್ಯದರ್ಶಿ ಅರುಣ್ ಕುಮಾರ್ ಬಿ. ಪಾಟೀಲ್, ಸಂಘಟನಾ ಕಾರ್ಯದರ್ಶಿ ಕೆ.ಪಿ. ನಾಗರಾಜ್, ಕಿರಣ್ ಕುಮಾರ್ ಕೆ.ಬಿ., ಸಂಚಾಲಕರಾದ ಎನ್. ಅರುಣಕುಮಾರ್, ಕೆ. ಪ್ರಕಾಶ್ ಹಾಗೂ ನಿರ್ದೇಶಕರಾದ ಪ್ರಕಾಶ್ ಕೆ., ಟಿ. ಕಿಶೋರ್‌ಕುಮಾರ್, ಎಚ್.ಎಸ್. ಮಹಾಂತೇಶ್ ಇತರರು ಇದ್ದರು.