ಸುದ್ದಿ360 ದಾವಣಗೆರೆ (davangere) ಅ.06: ಅಂದರ್ ಬಾಹರ್ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 13 ಜನರನ್ನು ಹಿಡಿದು ಇವರುಗಳಿಂದ ಜೂಜಾಟದಲ್ಲಿ ತೊಡಗಿಸಿದ್ದ ಒಟ್ಟು 2,10,000/- ರೂ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ದಾವಣಗೆರೆ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅ.5ರ ಗುರುವಾರದಂದು ದಾವಣಗೆರೆ ಜಿಲ್ಲೆ ಚನ್ನಗಿರಿ ಮಂಗೆನಹಳ್ಳಿ ಗ್ರಾಮದಿಂದ ಮೆದಿಕೆರೆ ಗ್ರಾಮದ ಕಡೆಗೆ ಹೋಗುವ ರಸ್ತೆ ಪಕ್ಕದ ಚಾನಲ್ ಏರಿಯಾ ಮೇಲಿನ ಸಾರ್ವಜನಿಕರ ಸ್ಥಳದಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರು ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಸಾದ್ ಪಿ ಹಾಗೂ ಸಿಬ್ಬಂದಿಯವರಾದ ಪ್ರಕಾಶ, ಸೋಮಶೇಖರಪ್ಪ, ಪ್ರಕಾಶ್ ರಾವ್, ಗೋವಿಂದರಾಜ್, ಮುತ್ತುರಾಜ್, ಅಂಜಿನಪ್ಪ, ಮಲ್ಲಿಕಾರ್ಜುನ ಹಾದಿಮನಿ, ಸಚಿನ್, ಮಂಜುನಾಥ ಮಟ್ಟೊಳಿ, ನಾಗರಾಜ್, ಲಿಂಗರಾಜ್ ರವರೊನ್ನೊಳಗೊಂಡ ವಿಶೇಷ ತಂಡವನ್ನು ರಚಿಸಿ ದಾಳಿಗೆ ಸೂಚಿಸಲಾಗಿತ್ತು. ಅದರಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಜೂಜಾಟದಲ್ಲಿ ತೊಡಗಿದ್ದ 13 ಜನರನ್ನು ಹಿಡಿದು ಜೂಜಾಟದಲ್ಲಿ ತೊಡಗಿಸಿದ್ದ ಒಟ್ಟು ರೂ. 2,10,000/- ಹಣವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ದಾಳಿಯಲ್ಲಿ ಭಾಗವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಹಾಗೂ ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಆರ್ ಬಿ ಬಸರಗಿ ಇವರು ಪ್ರಶ೦ಸನೆ ವ್ಯಕ್ತಪಡಿಸಿರುತ್ತಾರೆ.