‘ರಾಜ್ಯ ಸರ್ಕಾರಕ್ಕೆ ಕೇಂದ್ರದ ಸ್ಟ್ರೋಕ್’ – ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೀಗೆ ಹೇಳಿದ್ದೇಕೆ..?

ಸುದ್ದಿ360 ಹುಬ್ಬಳ್ಳಿ(hubli) ಅ.10: ಎಲ್ಲದಕ್ಕೂ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರದ ಸ್ಟ್ರೋಕ್‍ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಟಿ ಬೀಸಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು  ಮಾಧ್ಯಮಗಳಿಗೆ ಮಾತನಾಡಿದ ಅವರು, ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ಕೇಂದ್ರದ ಕಡೆ ಬೆರಳು ತೋರಿಸುತ್ತಿರುವ ಕುರಿತು ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ರಾಜ್ಯಕ್ಕೆ ಕೇಂದ್ರ ಸರ್ಕಾರದ ಸ್ಟ್ರೋಕ್ ಆಗಿದೆ. ಬರ ಆದರೂ ಕಾವೇರಿ ಆದರೂ ಎಲ್ಲದಕ್ಕೂ ಕೇಂದ್ರ. ಕಡೆಗೆ ಬೆರಳು ತೋರಿಸುತ್ತಾರೆ. ಈಗ ವಿದ್ಯುತ್ ಅಭಾವದ ಹಿನ್ನೆಲೆ ಕೇಂದ್ರಕ್ಕೆ ಬೊಟ್ಟು ಮಾಡುತ್ತಿದ್ದಾರೆ. ರಾಜ್ಯದ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಸರಿಯಾದ ಕಲ್ಲಿದ್ದಲುಗಳನ್ನು ಒದಗಿಸಿ. ವಿದ್ಯುತ್ ಉತ್ಪಾದನೆ ಮಾಡಿದರೆ ಈ ಸಮಸ್ಯೆ ಬರುತ್ತಿರಲಿಲ್ಲ. ತಮ್ಮ ಹಣಕಾಸಿನ ದುಸ್ಥಿತಿಗೆ ಅಸಮರ್ಪಕ ಕೆಲಸದಿಂದ ವಿದ್ಯುತ್ ಅಭಾವ ಬಿಗಡಾಯಿಸಿದೆ. ಸರಿಯಾದ ವಿದ್ಯುತ್ತನ್ನು ಪೂರೈಸುವುದು ರಾಜ್ಯ ಸರ್ಕಾರದ ಕರ್ತವ್ಯ.  ವಿದ್ಯುತ್ ಉತ್ಪಾದನೆಗೆ ಕೇಂದ್ರ ಏನು ಸಹಾಯ ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.

Leave a Comment

error: Content is protected !!