ಜಿಲ್ಲಾ ಕಾಂಗ್ರೆಸ್‍ ಕಚೇರಿಯಲ್ಲಿ ಯೋಗ ದಿನಾಚರಣೆ

ಸುದ್ದಿ360 ದಾವಣಗೆರೆ, ಜೂ.20: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧ್ಯಕ್ಷರಾದ ಎಚ್.ಬಿ ಮಂಜಪ್ಪ ರವರ ಅಧ್ಯಕ್ಷತೆಯಲ್ಲಿ ಯೋಗ ಗುರು ನೀಲಪ್ಪ ರವರ ನೇತೃತ್ವದಲ್ಲಿ ದಿನಾಂಕ 21-06-2022ರ ಮಂಗಳವಾರ ಬೆಳಗ್ಗೆ 11.30 ಕ್ಕೆ ಪಕ್ಷದ ಕಚೇರಿಯಲ್ಲಿ ಯೋಗ  ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ರಾಜ್ಯ ಸಮಿತಿ ಪದಾಧಿಕಾರಿಗಳು, ಜಿಲ್ಲಾ ಸಮಿತಿಯ ಪದಾಧಿಕಾರಿಗಳು, ಪಕ್ಷದ ಬ್ಲಾಕ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಎಲ್ಲಾ ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಪಕ್ಷದ ಜನಪ್ರತಿನಿಧಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಬೇಕೆಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ ಶೆಟ್ಟಿ ಕೋರಿರುವುದಾಗಿ ಕೆ.ಎಲ್.ಹರೀಶ್ ಬಸಾಪುರ ತಿಳಿಸಿದ್ದಾರೆ.

Leave a Comment

error: Content is protected !!