ಕೆ.ಆರ್.ಪೇಟೆಯಲ್ಲಿ ಭೂಕಂಪ –ಆತಂಕಗೊಂಡ ಜನ

ಸುದ್ದಿ360 ಮಂಡ್ಯ ಜೂ.23:  ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿಯ ಐಕನಹಳ್ಳಿ, ಮಾದಾಪುರ, ಚಿನ್ನೇನಹಳ್ಳಿ, ಗೊಂದಿಹಳ್ಳಿ, ಬಿದರಹಳ್ಳಿ, ಗೂಡೇಹೊಸಹಳ್ಳಿ ಗ್ರಾಮದ ಭಾಗಗಳಲ್ಲಿ ಇಂದು ಮುಂಜಾನೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಸಾರ್ವಜನಿರು ಭಯಭೀತಗೊಂಡಿದ್ದು, ಆತಂಕಕ್ಕೊಳಗಾಗಿದ್ದಾರೆ.

ಪಕ್ಕದ ಹಾಸನ, ಹೊಳೆನರಸೀಪುರ, ಅರಕಲಗೂಡು ತಾಲೂಕು ವ್ಯಾಪ್ತಿಯಲ್ಲಿಯೂ ಕೂಡ ಭೂಕಂಪದ ಅನುಭವವಾಗಿದೆ. ಇದೇ ವ್ಯಾಪ್ತಿಯಲ್ಲಿ ಬರುವ ಕೆ.ಆರ್.ಪೇಟೆ ತಾಲೂಕಿನ ಹಲವು ಗ್ರಾಮಗಳಲ್ಲಿ ಮುಂಜಾನೆ 4.30 ರಿಂದ 5 ಗಂಟೆ ಸಮಯದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.  ಇದರಿಂದ ಆತಂಕಗೊಂಡ ಜನರು ಮನೆಯಿಂದ ಹೊರಗೆ ಓಡಿ  ಬಂದು ತಮಗಾದ ಅನುಭವವನ್ನು ಒಬ್ಬರಿಗೊಬ್ಬರು ಹಂಚಿಕೊಂಡು ಆತಂಕಗೊಂಡಿದ್ದಾರೆ.

admin

admin

Leave a Reply

Your email address will not be published. Required fields are marked *

error: Content is protected !!