ಹೈವೆಯಲ್ಲಿ ಹೊತ್ತಿ ಉರಿದ ಕಾರು

ಸುದ್ದಿ360, ವಿಜಯನಗರ, ಜೂ.24: ಜಿಲ್ಲೆಯ ಹೊಸಪೇಟೆ ತಾಲೂಕಿನ ಧರ್ಮಸಾಗರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಕಾರಿನಲ್ಲಿ ಏಕಾಏಕಿ  ಬೆಂಕಿ ಕಾಣಿಸಿಕೊಂಡ ಪರಿಣಾಮ ಧಗಧಗನೆ ಹೊತ್ತಿ ಉರಿದ ಘಟನೆ ಇಂದು (ಶುಕ್ರವಾರ) ಸಂಜೆ ನಡೆದಿದೆ.

ಹೊಸಪೇಟೆಯಿಂದ ಬಳ್ಳಾರಿ  ರಾಷ್ಟ್ರೀಯ ಹೆದ್ದಾರಿ 63 ರ ಧರ್ಮಸಾಗರದ ಬಳಿ ಇರುವ ಖನಿಜ ತನಿಖಾ ಠಾಣೆಯ ಘಟನೆ ಸಮೀಪ ನಡೆದಿದ್ದು, ರಸ್ತೆಯಲ್ಲಿ ನಿಂತಿದ್ದ ಮಾರುತಿ 800 ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಮೇಲ್ನೋಟಕ್ಕೆ ತಾಂತ್ರಿಕ ದೋಷದಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಯ ಸಂಭವಿಸಿಲ್ಲ. ಚಾಲಕ ಸೇರಿ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಹೊಸಪೇಟೆ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

error: Content is protected !!