ಟ್ಯಾಂಕರ್ ಗೆ ಬೆಂಕಿ ಇಬ್ಬರು ಸಜೀವ ದಹನ –ನಾಲ್ವರಿಗೆ ಗಾಯ

ಸುದ್ದಿ360 ಧಾರವಾಡ,ಜೂ.29: ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್‌ಗೆ ಬೆಂಕಿ ಹತ್ತಿ ಉರಿದ ಘಟನೆ ಬೈಪಾಸ್ ನ ಯರಿಕೊಪ್ಪ ಬಳಿ ಬುಧವಾರ ರಾತ್ರಿ ಸಂಭವಿಸಿದ್ದು, ಘಟನೆಯಲ್ಲಿ ಟ್ಯಾಂಕರ್ ಚಾಲಕ ಸೇರಿ ಇಬ್ಬರು ಸುಟ್ಟು ಕರಕಲಾಗಿದ್ದಾರೆ ಎನ್ನಲಾಗಿದೆ.

ಬೆಳಗಾವಿಯಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಟ್ಯಾಂಕರ್ ಲಾರಿ ಎದುರಿನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಟ್ಯಾಂಕರ ಉರುಳಿ ಬಿದ್ದಿದೆ. ಆಗ ಟ್ಯಾಂಕರ್‌ನಲ್ಲಿದ್ದ ಡೀಸೆಲ್ ಸೋರಿಕೆಯಾಗಿ ಹೊತ್ತಿದ ಬೆಂಕಿ ಇಡೀ ಟ್ಯಾಂಕರ್ ಗೆ ಆವರಿಸಿದೆ. ಅಪಘಾತದಲ್ಲಿ ಇಬ್ಬರು ಸಾವನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಇನ್ನೂ ಮೃತಪಟ್ಟವರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Leave a Comment

error: Content is protected !!