ಶಿಷ್ಯೋಪನಯನ ಸಂಸ್ಕಾರ – ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಗೈದಿರುವ ಸಾಧಕರಿಗೆ ಸನ್ಮಾನ
ಸುದ್ದಿ360 ದಾವಣಗೆರೆ. ಜೂ.30: ಸುಶ್ರುತ ಆರೋಗ್ಯ ಪ್ರತಿಷ್ಠಾನದಿಂದ ನಗರದ ಲೋಕಿಕೆರೆ ರಸ್ತೆಯ ಶ್ರೀರಾಮ ನಗರದ ಶ್ರೀದೇವಿ ರೈಸ್ ಮಿಲ್ ಹತ್ತಿರ ನೂತನವಾಗಿ ನಿರ್ಮಿಸಿರುವ ಸುಶ್ರುತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಸಂಶೋಧನ ಕೇಂದ್ರದ ಉದ್ಘಾಟನೆ, ಮತ್ತು 2021-22ನೇ ಸಾಲಿನ ವಿದ್ಯಾರ್ಥಿಗಳಿಗೆ ಶಿಷ್ಯೋಪನಯನ ಸಂಸ್ಕಾರ ಹಾಗೂ ವಿಶ್ವ ವೈದ್ಯರ ದಿನಾಚರಣೆ ಪ್ರಯುಕ್ತ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಗೈದಿರುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜು.1ರಂದು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸುಶ್ರುತ ಆರೋಗ್ಯ ಪ್ರತಿಷ್ಠಾನದ ಕಾರ್ಯದರ್ಶಿ ಡಾ. ಬಿ.ಜಿ. ಸತೀಶ್ ತಿಳಿಸಿದ್ದಾರೆ.
ಸುಶ್ರುತ ಆಯುರ್ವೇದ ಆಸ್ಪತ್ರೆಯು ಸುಮಾರು 15 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಂಡಿದೆ. ಆಸ್ಪತ್ರೆಯು 100 ಬೆಡ್ ಗಳ ಪ್ರತ್ಯೇಕ ವಾರ್ಡುಗಳೊಂದಿಗೆ ಸುಸಜ್ಜಿತ ಗೊಂಡಿದ್ದು, ಒಳರೋಗಿಯಾಗಿ ಹಾಗೂ ಹೊರ ರೋಗಿಗಳ ವಿಭಾಗಗಳನ್ನು ಹೊಂದಿದ್ದು, ಪ್ರತ್ಯೇಕ ಪಂಚಕರ್ಮ ಚಿಕಿತ್ಸಾ ವಿಭಾಗಗಳು, ಶಸ್ತ್ರಾಗಾರ, ಪ್ರಸೂತಿ ವಿಭಾಗಗಳನ್ನು ಹೊಂದಿದೆ. ವಾತವ್ಯಾಧಿ, ಚರ್ಮರೋಗ, ಪಕ್ಷಾಘಾತ, ಪೈಲ್ಸ್, ಫಿಸ್ಟೂಲಾ, ಮುಂತಾದ ಗಂಭೀರ ಕಾಯಿಲೆಗಳಿಗೆ ಪಂಚಕರ್ಮ ಚಿಕಿತ್ಸೆ ಲಭ್ಯವಿದ್ದು, ಎಸ್ ಕೆಡಿಆರ್ ಪಿ ಸಂಪೂರ್ಣ ಸುರಕ್ಷಾ ವಿಮೆ ಯೋಜನೆ ಲಭ್ಯವಿದೆ. ಬಿಪಿಎಲ್ ಕಾರ್ಡು ದಾರರಿಗೆ ಚಿಕಿತ್ಸಾದರದಲ್ಲಿ ಶೇ.30 ರಿಯಾಯ್ತಿ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಜಗಳೂರು ತಾಲ್ಲೂಕಿನ ಕಣ್ವಕುಪ್ಪೆ ಗವಿಮಠದ ಶ್ರೀನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಮಹಾಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ , ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ , ರವಿಂದ್ರನಾಥ್ , ಶಿವಮೊಗ್ಗದ ವಿಧಾನ ಪರಿಷತ್ ಸದಸ್ಯ ರುದ್ರೇಗೌಡ ಎಸ್ , ಕೈದಾರಿಕೋದ್ಯಮಿ ಎಸ್.ಎಸ್ . ಗಣೇಶ್ , ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ , ಮಾಯಕೊಂಡ ಶಾಸಕ ಪ್ರೊ.ಎನ್.ಲಿಂಗಣ್ಣ , ಮಹಾನಗರ ಪಾಲಿಕೆ ಮಾಜಿ ಮೇಯರ್ , ಹಾಲಿ ಸದಸ್ಯ ಎಸ್.ಟಿ. ವೀರೇಶ್ , ಬಾಪೂಜಿ ವಿದ್ಯಾಸಂಸ್ಥೆ ನಿರ್ದೇಶಕರಾದ ಡಾ.ಪ್ರಭಾ ಮಲ್ಲಿಕಾರ್ಜುನ್ , ಪಾಮೇನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಬಸವರಾಜಪ್ಪ , ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರ್ಗೌಡ ಮತ್ತಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.