ಮಂಗಳಮುಖಿಯರು ಜೇಬಿಗೆ ಕೈಹಾಕಿದ್ರೆ ದೂರು ಕೊಡಿ!

ಸುದ್ದಿ360,ದಾವಣಗೆರೆ,ಜು.05: ನಗರದ ಹೊರವಲಯ ಬಾಡ ಕ್ರಾಸ್ ಬಳಿ ಮಂಗಳಮುಖಿಯರ ಕಾಟ ಹೆಚ್ಚಾಗಿದೆ ಎಂಬ ದೂರುಗಳು ಬಂದಿದ್ದು ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್‌ಪಿ ಸಿ.ಬಿ. ರಿಷ್ಯಂತ್  ತಿಳಿಸಿದ್ದಾರೆ.

ನಗರದ ಬಡಾವಣೆ ಪೊಲೀಸ್ ಠಾಣೆ ಆವರಣದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿ, ಸಾರ್ವಜನಿಕರ ವಾಹನ ಅಡ್ಡಗಟ್ಟಿ, ಹಣ ಕೇಳುವುದು, ಮೈ ಮುಟ್ಟುವುದು, ಜೇಬಿಗೆ ಕೈ ಹಾಕಿ ಹಣ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿಈ ಸಂಬಂಧ ಅವರೊಂದಿಗೆ ಮಾತುಕತೆ ನಡೆಸಿದ್ದು, ಹಣ ಕೇಳುವ ನೆಪದಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಆದರೂ ಇಂತಹ ಘಟನೆ ನಡೆದಾಗ ದೂರು ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ಸಿ.ಬಿ. ರಿಷ್ಯಂತ್ ತಿಳಿಸಿದ್ದಾರೆ.

Leave a Comment

error: Content is protected !!