ಜು.19ರಿಂದ ಗೃಹಲಕ್ಷ್ಮೀಗೆ ಅರ್ಜಿ ಆರಂಭ:  ಅರ್ಜಿ ಸಲ್ಲಿಕೆ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು…

ಸುದ್ದಿ360 ಬೆಂಗಳೂರು: ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ (gruha lakshmi) ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜುಲೈ 19 ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ (Minister of Women and Child Welfare) ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ ಮನೆ ಯಜಮಾನಿಗೆ ಈ ಯೋಜನೆಯ ಹಣ ದೊರೆಯಲಿದ್ದು, ಯಾವುದೇ ಕಡೆಯ ದಿನಾಂಕ ನಿಗಧಿಯಾಗಿರುವುದಿಲ್ಲ. ಗ್ರಾಮ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಬಿಬಿಎಂಪಿ ವಾರ್ಡ್ ಕಚೇರಿ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು ಎಂದರು. ಗೃಹಲಕ್ಷ್ಮೀ’ಯೋಜನೆಗೆ ನೋಂದಣಿಗೆ ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ, ಬ್ಯಾಂಕ್ ಖಾತೆಯ ಪಾಸ್ ಬುಕ್ ಅಗತ್ಯ. ಒಂದು ವೇಳೆ ಆಧಾರ್ ನಂಬರ್ ಜೋಡಣೆಯಾಗದಿರುವ ಬೇರೆ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಬಯಸಿದಲ್ಲಿ ಆ ಖಾತೆಯ ಪಾಸ್ ಬುಕ್ ಅಗತ್ಯ ಎಂದು ತಿಳಿಸಿದರು.

ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಮೊಬೈಲ್ ಮೂಲಕ ಅರ್ಜಿ ಸಲ್ಲಿಸಲು ನೆರವಾಗುವ ಸಲುವಾಗಿ 500 ಪ್ರಜಾಪ್ರತಿನಿಧಿಗಳನ್ನು ನೇಮಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಜಾಪ್ರತಿನಿಧಿ ( ಮೂಲಕ ನೊಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರ ಮನೆಗೆ ತಲುಪಿಸಲಾಗುವುದು. ಅರ್ಜಿದಾರರು ನೀಡಿದ ಮೊಬೈಲ್ ಸಂಖ್ಯೆಗೆ ಎಸ್ ಎಂಎಸ್ ಮೂಲಕ ಮಂಜೂರಾತಿ ಸಂದೇಶ ರವಾನೆ ಮಾಡಲಾಗುತ್ತದೆ. ಫಲಾನುಭವಿಯ ಆಧಾರ್ ಜೋಡಣೆಯಾಗಿರುವ ಖಾತೆಗೆ ಡಿಬಿಟಿ ಮೂಲಕ ಹಣ ಜಮೆ ಮಾಡುತ್ತೇವೆ. ಬೇರೆ ಖಾತೆಗೆ ಆರ್ ಟಿಜಿಎಸ್ ಮೂಲಕ ಹಣ ಜಮೆ ಮಾಡಲಾಗುತ್ತದೆ. ನೋಂದಣಿಗೆ ಯಾವುದೇ ಶುಲ್ಕ, ಯಾವುದೇ ಅಂತಿಮ ದಿನಾಂಕ ಮತ್ತು ಸಮಯ ನಿಗದಿಪಡಿಸಿಲ್ಲ ಎಂದು ಹೇಳಿದರು.

ಜು.17 ಇಲ್ಲವೇ 19 ಅಧಿಕೃತ ಚಾಲನೆ

ಜು.17ರ ಸೋಮವಾರ ಅಧಿಕೃತವಾಗಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು, ಯೋಜನೆ ಉದ್ಘಾಟಿಸಲು ಕೇಂದ್ರ ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡಲಾಗಿದೆ, ನಾಯಕರು ಒಪ್ಪಿಗೆ ಕೊಟ್ಟರೆ ಆಗಸ್ಟ್ 17 ರಂದೇ ಖಾತೆಗೆ ಹಣ ವರ್ಗಾವಣೆಯಾಗಲಿದೆ, ಇಲ್ಲದಿದ್ದರೇ ಆಗಸ್ಟ್ 19ಕ್ಕೆ ಹಣ ಜಮಾವಣೆಯಾಗಲಿದೆ ಎಂದು ಸಚಿವರು ತಿಳಿಸಿದರು.

ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಸಮಯ ನೀಡಲಿಲ್ಲವಾದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಜುಲೈ 19ರಂದು ಚಾಲನೆ ನೀಡಲಾಗುವುದು ಎಂದರು.

Leave a Comment

error: Content is protected !!