ಜಿಎಂಐಟಿ ಉದ್ಯೋಗಾಧಿಕಾರಿ ತೇಜಸ್ವಿ ಕಟ್ಟಿಮನಿ ಅವರಿಗೆ ಫೂಯಲ್ ಸಂಸ್ಥೆಯಿಂದ ಮೆಚ್ಚುಗೆಯ ಪ್ರಮಾಣ ಪತ್ರ

gmit-tejaswi kattimani

ಸುದ್ದಿ360 ದಾವಣಗೆರೆ: ಇತ್ತೀಚಿಗೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಫ್ಯೂಚರ್ ಸ್ಕಿಲ್ಸ್ ಸಮ್ಮಿತ್ ಅಂಡ್ ಲೀಡರ್ಶಿಪ್ ಅವಾರ್ಡ್ ಕಾರ್ಯಕ್ರಮದಲ್ಲಿ ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ತೇಜಸ್ವಿ ಕಟ್ಟಿಮನಿ ಟಿ ಆರ್ ರವರಿಗೆ ನಾಯಕತ್ವ ಪ್ರಶಸ್ತಿ ಮತ್ತು ಮೆಚ್ಚುಗೆ ಪ್ರಮಾಣ ಪತ್ರವನ್ನು ನೀಡಿ ಗೌರವಿಸಿದೆ.

ಪುಣೆ ಮೂಲದ ಲಾಭ ರಹಿತ ಸಂಸ್ಥೆಯಾದ ಫ್ರೆಂಡ್ಸ್ ಯೂನಿಯನ್ ಫಾರ್ ಎನರ್ಜೈಸಿಂಗ್ ಲೈಫ್ (ಫೂಯಲ್) ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಜಿಎಂಐಟಿ ಕಾಲೇಜಿನಲ್ಲಿ ಕಳೆದ ಐದು ವರ್ಷಗಳಿಂದ ಫೂಯಲ್ ಸಂಸ್ಥೆಯೊಡನೆ ಜೊತೆಗೂಡಿ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಗುಣಮಟ್ಟದ ಕಾರ್ಯಕ್ಷಮತೆಯನ್ನು ಸಾಧಿಸುವಲ್ಲಿ ಮಹತ್ವದ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿದ್ದಾರೆ.

ಪ್ರಶಸ್ತಿ ಸ್ವೀಕರಿಸಿದ ಉದ್ಯೋಗ ಅಧಿಕಾರಿಗೆ ಕಾಲೇಜಿನ ಚೇರ್ಮನ್ ಜಿಎಂ ಲಿಂಗರಾಜು, ಆಡಳಿತ ಅಧಿಕಾರಿ ವೈಯೂ ಸುಭಾಷ್ ಚಂದ್ರ, ಕಾಲೇಜಿನ ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಎಂಬಿ, ವಿವಿಧ ವಿಭಾಗಗಳ ಮುಖ್ಯಸ್ಥರುಗಳು ಮತ್ತು ಪ್ರಾಧ್ಯಾಪಕ ವರ್ಗದವರು ಅಭಿನಂದಿಸಿದ್ದಾರೆ.

admin

admin

Leave a Reply

Your email address will not be published. Required fields are marked *

error: Content is protected !!