ಸುದ್ದಿ360 ಬೆಂಗಳೂರು: ಕರ್ನಾಟಕ ವಿಧಾನಸಭೆ ಬಜೆಟ್ ಅಧಿವೇಶನವು ಇಂದಿನಿಂದ ಆರಂಭಗೊಂಡಿದ್ದು, 10 ದಿನಗಳ ಕಾಲ ನಡೆಯಲಿದೆ. ಸರ್ಕಾರ ರಚನೆಯಾಗಿ ಒಂದು ತಿಂಗಳು ಕಳೆದರೂ ಪ್ರಮುಖ ವಿರೋಧ ಪಕ್ಷ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನು ಘೋಷಣೆ ಮಾಡದಿರುವುದು ಮುಖ್ಯಮಂತ್ರಿ ಸಿದ್ಧರಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರ ಟೀಕೆಗೆ ಬಿಜೆಪಿ ಒಳಗಾಗಿದೆ.
ನಮ್ಮಲ್ಲಿ ಎಲ್ಲರೂ ಸಮರ್ಥರು
ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಟೀಕಿಸಿರುವುದಕ್ಕೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಾಳೆಯಿಂದ ಅಧಿವೇಶನ ಅಧಿಕೃತವಾಗಿ ಆರಂಭವಾಗಲಿದೆ. ಅಷ್ಟರೊಳಗೆ ವಿಪಕ್ಷನಾಯಕನ ಆಯ್ಕೆಯಾಗಲಿದೆ. ಪ್ರತಿಪಕ್ಷದ ನಾಯಕನಾಗಲು ನಮ್ಮಲ್ಲಿರುವ 66 ಜನರು ಸಮರ್ಥರಿದ್ದಾರೆ ಎಂದಿದ್ದಾರೆ.
ಕರ್ನಾಟಕ ವಿಧಾನಸಭೆಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಹಿನ್ನೆಲೆಯಲ್ಲಿ ಕೇಂದ್ರದ ವೀಕ್ಷಕರಾಗಿ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇಮಕ ಮಾಡಿದ್ದಾರೆ.
ಅಧಿವೇಶನವು ಆಡಳಿತ ಪಕ್ಷ ಕಾಂಗ್ರೆಸ್ ಮತ್ತು ವಿರೋಧಪಕ್ಷಗಳಾದ ಬಿಜೆಪಿ, ಜೆಡಿಎಸ್ ನಡುವೆ ವಾಕ್ಸಮರಕ್ಕೆ ವೇದಿಕೆಯಾಗಲಿದೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಿದ್ಧರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇವರು ಸಹಿಯೊಂದಿಗೆ ಹಂಚಿದ ಗ್ಯಾರಂಟಿ ಕಾರ್ಡ್ ಒಳಗೊಂಡಂತೆ ಇವುಗಳ ಅನುಷ್ಠಾನದಲ್ಲಿನ ಗೊಂದಲ. ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ ರದ್ಧರಿಗೆ ಮಸೂದೆ ಮಂಡನೆ ಮತ್ತಿತರ ವಿಚಾರಗಳು ಎರಡೂ ಸದನಗಳಲ್ಲಿ ಚರ್ಚೆಗೊಳಪಡುವ ಸಾಧ್ಯತೆಗಳು ದಟ್ಟವಾಗಿವೆ.