ಯೋಗಾಭ್ಯಾಸದಲ್ಲಿ ಹರಿಹರ ಶಾಸಕ ಎಸ್ ರಾಮಪ್ಪ
ಸುದ್ದಿ360 ಹರಿಹರ, ಜೂ.20: ಹರಿಹರದ ಹರಿಹರೇಶ್ವರ ದೇವಸ್ಥಾನದಲ್ಲಿ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪೂರ್ವಬಾವಿ ಯೋಗ ತರಬೇತಿ ನಡೆಯುತ್ತಿದ್ದು, ಹರಿಹರದ ಶಾಸಕ ಎಸ್ ರಾಮಪ್ಪ ಅವರು ಸೋಮವಾರ ಯೋಗ ಅಭ್ಯಾಸದಲ್ಲಿ ಪಾಲ್ಗೊಂಡರು.
ಸುದ್ದಿ360 ಹರಿಹರ, ಜೂ.20: ಹರಿಹರದ ಹರಿಹರೇಶ್ವರ ದೇವಸ್ಥಾನದಲ್ಲಿ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪೂರ್ವಬಾವಿ ಯೋಗ ತರಬೇತಿ ನಡೆಯುತ್ತಿದ್ದು, ಹರಿಹರದ ಶಾಸಕ ಎಸ್ ರಾಮಪ್ಪ ಅವರು ಸೋಮವಾರ ಯೋಗ ಅಭ್ಯಾಸದಲ್ಲಿ ಪಾಲ್ಗೊಂಡರು.
ಸುದ್ದಿ360 ಬೆಂಗಳೂರು, ಜೂ.19: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿರುವ ಸಾರ್ವಜನಿಕ ಸಮಾರಂಭ ಸ್ಥಳ ಕೊಮ್ಮಘಟ್ಟ ಕ್ಕೆ ಭೇಟಿ ನೀಡಿ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಎಸ್ ಟಿ ಸೋಮಶೇಖರ್, ಮುನಿರತ್ನ , ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.. ನಾಳೆ ಶಂಕು ಸ್ಥಾಪನೆಯಾಗಲಿರುವ ಬೆಂಗಳೂರು ಉಪನಗರ ರೈಲು ಯೋಜನೆ, ರಾಷ್ಟ್ರೀಯ ಹೆದ್ದಾರಿ ಕುರಿತು ಮುಖ್ಯಮಂತ್ರಿಗಳಿಗೆ ಅಧಿಕಾರಿಗಳು ಪ್ರಾತ್ಯಕ್ಷಿಕೆ ನೀಡಿ ವಿವರಣೆ ನೀಡಿದರು. ಪ್ರಧಾನಿ ನರೇಂದ್ರ ಮೋದಿಯವರು ಜೂನ್ 20, … Read more
ಸುದ್ದಿ360 ದಾವಣಗೆರೆ, ಜೂ.19: ಗುರುವಿನ ಅನುಪಸ್ಥಿತಿಯಲ್ಲಿ ಅವರ ಮೌಲ್ಯಗಳು, ಉಪದೇಶಗಳು ಅನುಷ್ಠಾನವಾಗುತ್ತಿದ್ದರೆ ಅವರು ಶ್ರೇಷ್ಠ ಗುರು ಎನಿಸಿಕೊಳ್ಳುತ್ತಾರೆ. ಸಿದ್ಧಗಂಗಾ ಶ್ರೀಗಳು ಅಂತಹ ಶ್ರೇಷ್ಠರಲ್ಲಿ ಒಬ್ಬರಾಗಿದ್ದಾರೆ ಎಂದು ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ನಗರದ ಎವಿಕೆ ರಸ್ತೆಯ ಜಿಲ್ಲಾ ಗುರುಭವನದಲ್ಲಿ ಭಾನುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಚುಟುಕು ಸಾಹಿತ್ಯ ಪರಿಷತ್, ವಚನ ಸಾಹಿತ್ಯ ಪರಿಷತ್, ರಾಜ್ಯ ಸಮಾನ ಮನಸ್ಕರ ಕಲೆ, ಸಾಹಿತ್ಯ, ಸಂಗೀತ, ಕ್ರೀಡಾ ಸೇವಾ ಒಕ್ಕೂಟ, ತೆಲಿಗಿ ಸ್ಫೂರ್ತಿ ಪ್ರಕಾಶನ, ಯೋಗಾನಂದ ಯೋಗಕೇಂದ್ರ, ಬಜ್ಜಿ … Read more
ಸುದ್ದಿ360 ಬೆಂಗಳೂರು, ಜೂ.19: ಪ್ರಧಾನಿ ನರೇಂದ್ರ ಮೋದಿಯವರು ಜೂನ್ 20 ಮತ್ತು 21ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಜೂನ್ 20, ನಾಳೆ ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಮಿದುಳು ಸಂಶೋಧನಾ ಕೇಂದ್ರ ಲೋಕಾರ್ಪಣೆಗೊಳಿಸಿ ಬಾಗ್ಚಿ- ಪಾರ್ಥಸಾರಥಿ ಆಸ್ಪತ್ರೆಯ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ. ಮಧ್ಯಾಹ್ನ 1.45 ಕ್ಕೆ ಪ್ರಧಾನಿಯವರು (ಬೇಸ್) ಕ್ಯಾಂಪಸ್ ಗೆ ತೆರಳಿ, ಡಾ:ಬಿ.ಆರ್.ಅಂಬೇಡ್ಕರ್ ಕಂಚಿನ ಪುತ್ಥಳಿ ಅನಾವರಣ, … Read more
ಸುದ್ದಿ360 ಬಾಗಲಕೋಟೆ, ಜೂ.19: ಅಗ್ನಿಪಥ ಯೋಜನೆಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯ ಹಿಂದೆ ರಾಜಕೀಯ ಕೈವಾಡ ಇರುವುದು ಕಾಣಿಸುತ್ತಿದೆ. ರಾಜ್ಯ ಮತ್ತು ದೇಶದಲ್ಲಿ ಈ ಹಿಂಸಾಚಾರದ ಹಿಂದೆ ಯಾರಿದ್ದಾರೆಂದು ಗೊತ್ತಿದೆ. ಈ ಬಗ್ಗೆ ತನಿಖೆಯಾಗಲಿದೆ. ತಪ್ಪಿತಸ್ಥರಿಗೆ ಖಂಡಿತವಾಗಿ ಶಿಕ್ಷೆಯಾಗುತ್ತೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆಯ ಗಲಗಲಿ ಗ್ರಾಮದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಅಗ್ನಿಪಥ ಯೋಜನೆ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರ ಸ್ಪಷ್ಡವಾಗಿ ಹೇಳಿವೆ. ಅಗ್ನಿಪಥ ಯೋಜನೆಯಿಂದ ಅನ್ಯಾಯವಾಗುವಂತಹ ಪ್ರಶ್ನೆಯೇ ಇಲ್ಲ. ಇದರಿಂದ … Read more
ಗೋಲ್ಡನ್ ಮೆಮೋರೀಸ್‍ಗೆ ಮರುಜೀವ ನೀಡಿದ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಗೋಲ್ಡನ್ ಗ್ರೂಪ್ ಸುದ್ದಿ360 ದಾವಣಗೆರೆ, ಜೂ.19: ಕಾಲೇಜು ದಿನಗಳ ನೆನಪುಗಳು ವ್ಯಕ್ತಿಯ ಜೀವನದಲ್ಲಿ ಸದಾ ಹಚ್ಚ ಹಸಿರಾಗಿರುತ್ತವೆ. ಇವು ಜೀವನದ ಕಡೆಯವರೆಗೂ ನೆನಪಿನಲ್ಲಿ ಇರುವಂತವುಗಳಾಗಿದ್ದು, ಸುವರ್ಣ ಕಾಲವಿದ್ದಂತೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಸಿ.ಬಿ. ರಿಷ್ಯಂತ್ ಅಭಿಪ್ರಾಯಪಟ್ಟರು. ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ 1989-90ನೇ ಸಾಲಿನ ವಿದ್ಯಾರ್ಥಿಗಳ ಗೋಲ್ಡನ್ ಮೆಮೋರಿಸ್ ಗ್ರೂಪ್ ವತಿಯಿಂದ ನಗರದ ಎಸ್.ಎಸ್. ಬಡಾವಣೆಯಲ್ಲಿನ ಆಫೀಸರ್ಸ್ ಕ್ಲಬ್‌ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸ್ನೇಹ ಸಮ್ಮಿಲನ ಹಾಗೂ ಗುರುವಂದನೆ … Read more
ಸುದ್ದಿ360 ಬೆಳಗಾವಿ, ಜೂ.19: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ವ್ಯಕ್ತಿಯೋರ್ವನ ಕೊಲೆ ನಡೆದಿದೆ. ಇದರಿಂದ ಉದ್ರಿಕ್ತಗೊಂಡ ಜನರು ಕಂಡಲ್ಲೆಲ್ಲ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಹಳೇ ಜಮೀನು ವಿವಾದಕ್ಶೆ ಸಂಬಂಧಿಸಿದಂತೆ ಶನಿವಾರ ರಾತ್ರಿ ಎರಡು ಕುಟುಂಬಗಳ ನಡುವೆ ಜಗಳ ಆರಂಭಗೊಂಡಿದೆ. ಈ ವೇಳೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಇದರಿಂದ ಆಕ್ರೋಶಗೊಂಡ ಹತ್ಯೆಗೀಡಾದ ವ್ಯಕ್ತಿಯ ಕುಟುಂಬದವರು ಕೊಲೆ ಮಾಡಿದವರ ಮೇಲೆ ಸೇಡು ತೀರಿಸಿಕೊಳ್ಳಲು ಹುಡುಕಾಟ ಆರಂಭಿಸಿದ್ದಾರೆ. ಇಡೀ … Read more
ಸುದ್ದಿ360 ಬೆಂಗಳೂರು, ಜೂ.19: ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾತನಾಡಿ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಸ್ವಾಮೀಜಿ ಗಳು ನೀಡಿರುವ ಮನವಿಯನ್ನು ತರಿಸಿಕೊಂಡು ಏನೆಲ್ಲಾ ಬದಲಾವಣೆ ಮಾಡಬೇಕೋ ಅದನ್ನು ಮುಕ್ತ ಮನಸ್ಸಿನಿಂದ ಕೈಗೊಳ್ಳಲಾಗುವುದು. ಇದನ್ನು ಪ್ರತಿಷ್ಠೆ ಎಂದು ಪರಿಗಣಿಸಿಲ್ಲ. ಪಠ್ಯದ ಕುರಿತು ಆಕ್ಷೇಪವಿದ್ದರೆ, ಅದನ್ನು ನಿವಾರಿಸಲು ಸಿದ್ಧರಿದ್ದೇವೆ. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಭಾರತ ಹಾಗೂ ಕರ್ನಾಟಕ ಕಟ್ಟಲು ಶ್ರಮಿಸಿರುವ ಹಿರಿಯರು, ರಾಜಮಹಾರಾಜರು, ಸಾಹಿತಿಗಳು, ಕಲಾಕಾರರು, ಜ್ಞಾನಪೀಠ ವಿಜೇತರ ಬಗ್ಗೆ ಅಪಾರ ಗೌರವವಿದೆ. ಯಾವುದೇ … Read more
ಸುದ್ದಿ360 ಬೆಂಗಳೂರು, ಜೂ.19: ಕಾಂಗ್ರೆಸ್ ಬೆಂಕಿಗೆ ತುಪ್ಪ ಹಾಕುವ ಕೆಲಸವನ್ನು ಇಡೀ ದೇಶದಲ್ಲಿ ಮಾಡುತ್ತಿದೆ ಎನ್ನುವುದಕ್ಕೆ ಖಾನಾಪುರ ಶಾಸಕರು ಧರಣಿ ಮಾಡುತ್ತಿರುವುದು ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಅಗ್ನಿಪಥ್ ಒಂದು ವಿನೂತನ ಕಾರ್ಯಕ್ರಮ. ಇಡೀ ಜಗತ್ತಿನಲ್ಲಿ ಯುವಕರಿಗೆ ಮಿಲಿಟರಿ ತರಬೇತಿ ನೀಡುವ ವ್ಯವಸ್ಥೆ ಇದೆ. 17 – 21 ವರ್ಷ ಉತ್ತಮ ತರಬೇತಿ ಪಡೆದರೆ, ಬೇರೆ ಅವಕಾಶಗಳು ಸಿಗುತ್ತವೆ. ಮಿಲಿಟರಿ ಹಾಗೂ ಅರೆಮಿಲಿಟರಿ ಪಡೆಗಳಲ್ಲಿ … Read more
ಸುದ್ದಿ360 ದಾವಣಗೆರೆ, ಜೂನ್ 18: ಪಿಯುಸಿ ಪರೀಕ್ಷೆಯಲ್ಲಿ ನಗರದ ಸರ್‌ಎಂವಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಜಿಯಾ ಎಂ. ಜೈನ್ 589 ಅಂಕ ಗಳಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದರೆ, ಎಂ.ಎಸ್. ಶ್ರೇಷ್ಠ 587 ಹಾಗೂ ಜಿ. ಕಾರ್ತಿಕ 587 ಅಂಕ ಗಳಿಸಿ ಜಿಲ್ಲೆಗೆ ತೃತೀಯ ಸ್ಥಾನ ಗಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಉತ್ತಮ್ ಹಂಸರಾಜ್ ಹಾಗೂ ಕುಮಾರಿ ಎಂ.ಎಸ್. ಸೃಷ್ಟಿ 590 ಅಂಕ ಗಳಿಸಿ ಕಾಲೇಜಿಗೆ ಪ್ರಥಮ … Read more