ಆ.4: ರಾಜ್ಯಕ್ಕೆ ಅಮಿತ್ ಷಾ ಭೇಟಿ – ಕಾರ್ಯಕರ್ತರ ಮನವೊಲಿಕೆಗೆ ಮುಂದಾದ ಹೈಕಮಾಂಡ್

ಸುದ್ದಿ360 ಬೆಂಗಳೂರು ಆ.2: ಕೇಂದ್ರ ಗೃಹ ಸಚಿವ ಅಮಿತ್ ಶಾ ದಿಡೀರ್ ಎಂಬಂತೆ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದು, ಗುರುವಾರ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಗಳೂರಿಗೆ ತೆರಳಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳುವ ಸಾಧ್ಯತೆಯಿದೆ. ದಕ್ಷಿಣ ಕನ್ನಡದಲ್ಲಿ ಇತ್ತೀಚೆಗೆ ನಡೆದ ಹತ್ಯೆಗಳಿಂದ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ಆಕ್ರೋಶಗೊಂಡಿರುವ ಬೆನ್ನಲ್ಲೇ ಅಮಿತ್ ಷಾ ಅವರ ರಾಜ್ಯ ಪ್ರವಾಸ ಮಹತ್ವ ಪಡೆದುಕೊಂಡಿದೆ. ಸ್ವಪಕ್ಷೀಯರ ವಿರುದ್ಧವೇ ಕಾರ್ಯಕರ್ತರು ತಿರುಗಿಬಿದ್ದಿರುವುದರಿಂದ … Read more

ರಾಜಕೀಯ ಕಾರಣಕ್ಕೆ ಕೊಲೆಗಳಾಗುತ್ತಿರುವುದು ನಮ್ಮ ದೌರ್ಬಾಗ್ಯ: ಸಚಿವ ಜೆ.ಸಿ. ಮಾಧುಸ್ವಾಮಿ

ಚುನಾವಣಾ ವರ್ಷವಾದ್ದರಿಂದ ಪ್ರಚೋದನೆಗಳು ಹೆಚ್ಚಾಗಿವೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಲಿದೆ ಎಂದು ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು. ಸುದ್ದಿ360, ದಾವಣಗೆರೆ ಜು.30: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿಲ್ಲ. ಕೆಲವೇ ಘಟನೆ ಹೊರತುಪಡಿಸಿದರೆ, ಕಾಂಗ್ರೆಸ್ ಕಾಲದಲ್ಲಿ ನಡೆದಷ್ಟು ಪ್ರತಿಭಟನೆ, ಹೋರಾಟ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿಲ್ಲ ಎಂದು ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೊಲೆಗಳಾಗಿದ್ದಕ್ಕೆ … Read more

ರಾಷ್ಟ್ರೀಯ  ತನಿಖಾ ದಳಕ್ಕೆ ಪ್ರವೀಣ್ ಹತ್ಯೆ ಪ್ರಕರಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜು. 29: ಸುಳ್ಯದ ಬಿಜೆಪಿ ಮುಖಂಡ  ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ  ತನಿಖಾ ದಳಕ್ಕೆ (NIA) ವಹಿಸಲು ತೀರ್ಮಾನಿಸಲಾಗಿದೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನ  ಶಕ್ತಿಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರವೀಣ್ ಹತ್ಯೆ ವ್ಯವಸ್ಥಿತವಾಗಿ ಆಗಿದೆ ಹಾಗೂ ಇದೊಂದು  ಅಂತರರಾಜ್ಯ ವಿಚಾರವಾಗಿದೆ. ಡಿಜಿ, ಐಜಿ ಅವರ ಬಳಿ ಚರ್ಚಿಸಲಾಗಿದ್ದು, ಅದರ ಸಂಪೂರ್ಣ ಮಾಹಿತಿಯನ್ನು ಪಡೆಯಲು ಸೂಚಿಸಲಾಗಿದೆ. ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಮಾಹಿತಿ ಪಡೆದ ನಂತರ ಗೃಹ … Read more

ಕರ್ನಾಟಕಕ್ಕೆ ಎನ್ ಐ ಎ ಅಗತ್ಯತೆ ಕುರಿತು ಕೇಂದ್ರಕ್ಕೆ ಮನವರಿಕೆ

ಪಿಎಫ್ಐ ಬ್ಯಾನ್ ಕೇಂದ್ರದಿಂದ ಶೀಘ್ರ ಕ್ರಮ: ಮುಖ್ಯಮಂತ್ರಿ ವಿಶ್ವಾಸ ಸುದ್ದಿ360 ಮಂಗಳೂರು, ಜುಲೈ 28 : ಕರ್ನಾಟಕ ರಾಜ್ಯಕ್ಕೆ ರಾಷ್ಟ್ರೀಯ ತನಿಖಾ ದಳವನ್ನು ಒದಗಿಸಲು ಕೋರಲಾಗಿದೆ. ವಿಶೇಷವಾಗಿ ಮಂಗಳೂರು ಭಾಗಕ್ಕೆ ಎನ್ ಐ ಎ ಯ ಅವಶ್ಯಕತೆ ಇದೆ ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗಿದೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ಮಾಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಾಥಮಿಕ ತನಿಖಾ … Read more

ಪ್ರವೀಣ್ ಹತ್ಯೆ ಯೋಜನಾಬದ್ಧವಾದ ಭಯೋತ್ಪಾದಕ ಕೃತ್ಯ: ಮುಖ್ಯಮಂತ್ರಿ ಬೊಮ್ಮಾಯಿ

ಸರ್ಕಾರ ಮತ್ತು ಬಿಜೆಪಿ ಪಕ್ಷದಿಂದ ತಲಾ 25 ಲಕ್ಷ ರೂ ಚೆಕ್ ಪ್ರವೀಣ್ ಕುಟುಂಬಕ್ಕೆ ಸುದ್ದಿ360 ಮಂಗಳೂರು, ಜು. 28 : ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಲೆಪ್ರಕರಣವನ್ನು ಬೇಧಿಸುವವರೆಗೆ ಅಕ್ಷರಶ: ದಣಿವಿಲ್ಲದೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಅವರು ಇಂದು ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ಮಾಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರವೀಣ್ ತಮ್ಮ … Read more

ಪ್ರವೀಣ್ ನೆಟ್ಟಾರು ಹತ್ಯೆ- ಸಾಮೂಹಿಕ ರಾಜೀನಾಮೆಗೆ ಮುಂದಾದ ದಾವಣಗೆರೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು

ಸುದ್ದಿ360 ದಾವಣಗೆರೆ ಜು.27: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು‌‌ ಕೊಲೆ ಖಂಡಿಸಿ, ದಾವಣಗೆರೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ. ಹಾಗೂ ಹತ್ಯೆ ಕಾರಣರಾದವರನ್ನು ಕೂಡಲೇ ಬಂಧಿಸಿ ಉಗ್ರಶಿಕ್ಷೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಆರ್. ಎಲ್. ಶಿವಪ್ರಕಾಶ್‌‌ ಅವರು, ಜಿಲ್ಲಾಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಹಿಂದೆ ನಡೆದಂತ ಬಿಜೆಪಿ ಕಾರ್ಯಕರ್ತರ … Read more

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆಯ ಕೊಲೆ – ಮೃತದೇಹ ಮೆರವಣಿಗೆ

ಸುದ್ದಿ360 ದಕ್ಷಿಣ ಕನ್ನಡ, ಜು.27: ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಎಂಬುವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಮಂಗಳವಾರ ರಾತ್ರಿ 9 ಗಂಟೆಗೆ ಈ ಘಟನೆ ನಡೆದಿದ್ದು,  ತಲವಾರಿನೊಂದಿಗೆ  ಬೈಕ್ ನಲ್ಲಿ ಬಂದ ತಂಡ ಪ್ರವೀಣ್ ತಲೆಗೆ ತಲವಾರ್ ಬೀಸಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ. ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಕ್ಷಯ ಕೋಳಿ ಅಂಗಡಿ ನಡೆಸುತ್ತಿದ್ದ ಪ್ರವೀಣ್, ಬಜರಂಗದಳ ಸೇರಿದಂತೆ ಸಂಘಪರಿವಾರದ ಹಿಂದೂ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು. ಮೃತದೇಹ … Read more

error: Content is protected !!