5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅಸ್ತು – ಮಾರ್ಚ್ 27ರಿಂದ ಪರೀಕ್ಷೆ

ಸುದ್ದಿ360 ಬೆಂಗಳೂರು: ರಾಜ್ಯ ಪಠ್ಯಕ್ರಮದಂತೆ ಅಭ್ಯಾಸ ನಡೆಸುತ್ತಿರುವ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ (ಬೋರ್ಡ್) ಪರೀಕ್ಷೆ ನಡೆಸಲು ಹೈಕೋರ್ಟ್ ಹಸಿರು ನಿಶಾನೆ ನೀಡಿದೆ. ಈ ಮೂಲಕ  ಹೈಕೋರ್ಟ್ ವಿಭಾಗೀಯ ಪೀಠ ಈ ಹಿಂದೆ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿದ್ದು, ಬೋರ್ಡ್ ಪರೀಕ್ಷೆಗೆ ಷರತ್ತು ಬದ್ಧ ಅನುಮತಿ ನೀಡಿದೆ. ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿರುವ ವಿಭಾಗೀಯ ಪೀಠ ಯಾವುದೇ ವಿದ್ಯಾರ್ಥಿಯನ್ನು ಫೇಲ್ ಮಾಡುವಂತಿಲ್ಲ ಎಂದು ಆದೇಶಿಸಿದೆ. 5 ಮತ್ತು 8ನೇ ತರಗತಿಯ … Read more

ದಶಪಥ ಹೆದ್ದಾರಿ ತರಾತುರಿ ಉದ್ಘಾಟನೆ: ಟೋಲ್ ಸಂಗ್ರಹ ಸಲ್ಲ –  ಸಿದ್ಧು

ಸುದ್ದಿ360 ದಾವಣಗೆರೆ ಮಾ.14: ಬೆಂಗಳೂರು ಮೈಸೂರು ದಶಪಥ ಹೆದ್ದಾರಿ ಕಾಮಗಾರಿ ಅರೆ ಬರೆಯಾಗಿದೆ. ಸರ್ವಿಸ್ ರಸ್ತೆಗಳೇ ಪೂರ್ಣಗೊಂಡಿಲ್ಲ. ಹೀಗಿರುವಾಗ ಟೋಲ್ ಸಂಗ್ರಹ ಮಾಡುವುದು ಸರಿಯಲ್ಲ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು. ಪ್ರಜಾಧ್ವನಿ ಯಾತ್ರೆಯಲ್ಲಿ ಪಾಲ್ಗೊಳ್ಳಲು ದಾವಣಗೆರೆಗೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ದಶಪಥ ರಸ್ತೆ ಇನ್ನೂ ಸಂಪೂರ್ಣವಾಗಿ ಮುಗಿದಿಲ್ಲ. ಸರ್ವಿಸ್ ರಸ್ತೆಗಳು ನಿರ್ಮಾಣವಾಗಿಲ್ಲ. ಅಲ್ಲಿನ್ನು ಬೈಪಾಸ್, ಹಲವು ಅಂಡರ್ ಪಾಸ್ ಕಾಮಗಾರಿಗಳೂ ಆಗಿಲ್ಲ. ಇದರಿಂದ ಅಲ್ಲಿನ ಸುತ್ತಮುತ್ತಲಿನ ಹಳ್ಳಿಜನರು ಬಹಳಷ್ಟು ತೊಂದರೆಗೆ ಈಡಾಗುತ್ತಾರೆ. … Read more

ಕವಲುದಾರಿಯ ಸುಳಿವು ನೀಡಿದ್ದ ಸಚಿವ ಸೋಮಣ್ಣ ಕಣ್ಣೀರಿಟ್ಟಿದ್ದು ಯಾಕೆ

ಸುದ್ದಿ360 ಬೆಂಗಳೂರು ಮಾ.14: ನಾನು ಬಿಜೆಪಿ ಬಿಟ್ಟು ಹೋಗುವುದಿಲ್ಲ ಎಂದು ಹೇಳುವ ಮೂಲಕ ಹಲವು ದಿನಗಳಿಂದ ಎದ್ದಿದ್ದ ಊಹಾಪೋಹದ ಮಾತುಗಳಿಗೆ ಸಚಿವ ಸೋಮಣ್ಣ ಉತ್ತರ ನೀಡಿದ್ದಾರೆ. ಅವರು ಇಂದು ಸುದೀರ್ಘ ಪತ್ರಿಕಾಗೋಷ್ಠಿಯಲ್ಲಿ ತಮ್ಮ ರಾಜಕೀಯ ಜೀವನ ಕುರಿತ ಮಾಹಿತಿಯನ್ನು ಹಂಚಿಕೊಂಡರು. ಪ್ರಧಾನಿ ಮೋದಿ, ಅಮಿತ್ ಶಾ, ಯಡಿಯೂರಪ್ಪ ಮತ್ತು ಕಟೀಲ್ ನನ್ನ ನಾಯಕರು ಎಂದು ಹೇಳಿದ ಅವರು ಬಿಜೆಪಿ ಬಿಟ್ಟು ಹೋಗೋದಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಮೂಲಕ  ಹಲವು ದಿನಗಳಿಂದ ಸಚಿವ ಸೋಮಣ್ಣನವರು ಬಿಜೆಪಿ ತೊರೆದು ಬೇರೆ … Read more

ಸುಮಲತಾ ಅಂಬರೀಶ್ ಬಿಜೆಪಿ ಸೇರುವುದು ಬಹುತೇಕ ಖಚಿತ

ಸುದ್ದಿ360 ಬೆಂಗಳೂರು, ಮಾ.09: ಮಂಡ್ಯದಿಂದ ರಾಜ್ಯ ವಿಧಾನಸಭೆಗೆ ಸ್ಪರ್ಧಿಸಲು ಒಲವು ಹೊಂದಿರುವ  ಮಂಡ್ಯ ಸಂಸದೆ ಸುಮಲತಾ ಅವರು ನಾಳೆ ಅಧಿಕೃತವಾಗಿ ಬಿಜೆಪಿ ಸೇರುವ ಸಾಧ್ಯತೆ ಇದೆ. ನಾಳೆ ಮಾ.10ರಂದು ಸುಮಲತಾ ಅಂಬರೀಶ್ ಮಹತ್ವದ ಪತ್ರಿಕಾಗೋಷ್ಟಿ ಕರೆದಿದ್ದಾರೆ. ಇದರಲ್ಲಿ ಸುಮಲತಾ ಅಧಿಕೃತವಾಗಿ ತಮ್ಮ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಕುರಿತು ಅವರ ಆಪ್ತರಾಗಿರುವ ಸಚ್ಚಿದಾನಂದ ಸೇರಿದಂತೆ ಹಲವು ನಾಯಕರು ಈ ಸುಳಿವು ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಹ ಈ ಕುರಿತ ಮಾಧ್ಯಮದವರ ಪ್ರಶ್ನೆಗೆ … Read more

ಮಾ.9: ಸಿಪಿಐ ನೇತೃತ್ವದಲ್ಲಿ ನಿವೇಶನ ರಹಿತರಿಂದ ವಿಧಾನ ಸೌಧ ಚಲೋ

ಸುದ್ದಿ360 ದಾವಣಗೆರೆ ಮಾ.9: ಭಾರತ ಕಮ್ಯುನಿಸ್ಟ್ ಪಕ್ಷದ ನೇತೃತ್ವದಲ್ಲಿ ಮಾರ್ಚ್ 9 ರಂದು ನಿವೇಶನ ರಹಿತರಿಂದ ವಿಧಾನಸೌಧ ಚಲೋ ನಡೆಸಲಾಗುವುದು ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಕಾಂ. ಅವರಗೆರೆ ಚಂದ್ರು ತಿಳಿಸಿದ್ದಾರೆ. ವಸತಿ ಇಲ್ಲದವರಿಗೆ ವಸತಿ ಒದಗಿಸಬೇಕು, ನಿವೇಶನ ಇಲ್ಲದವರಿಗೆ ನಿವೇಶನ ಕೊಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿ ವಿಧಾನಸೌಧ ಚಲೋ ನಡೆಸುವ ಮೂಲಕ ಸರ್ಕಾರಕ್ಕೆ ಒತ್ತಾಯಿಸಲಾಗುವುದು. ಅಂದು ಬೆಳಗ್ಗೆ 10.30 ಕ್ಕೆ ಬೃಹತ್ ಪ್ರತಿಭಟನೆ ಮೂಲಕ ಬೆಂಗಳೂರು ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕಿಗೆ ತೆರಳಿ ನಡೆಸಿ ಧರಣಿ ನಡೆಸಲಾಗುವುದು. … Read more

ಶೇ.17 ವೇತನ ಹೆಚ್ಚಳ – ಸರ್ಕಾರಿ ನೌಕರರ ಮುಷ್ಕರ ವಾಪಸ್

ಸರ್ಕಾರದ ಮಧ್ಯಂತರ ಆದೇಶಕ್ಕೆ ಮಣಿದ ಸರ್ಕಾರಿ ನೌಕರರು ಸುದ್ದಿ360 ಬೆಂಗಳೂರು ಮಾ.01: ರಾಜ್ಯ ಸರ್ಕಾರಿ ನೌಕರರೊಂದಿಗಿನ ಹಲವು ಸುತ್ತಿನ ಮಾತುಕತೆಗಳ ನಂತರ ರಾಜ್ಯ ಸರ್ಕಾರಿ ನೌಕರರ ವೇತನ ಶೇ.17 ರಷ್ಟು ಹೆಚ್ಚಳ ಮಾಡಿ ಮಧ್ಯಂತರ ಆದೇಶ ಮಾಡಿರುವ ಮುಖ್ಯಮಂತ್ರಿಗಳು ಇಂದೇ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುಷ್ಕರವನ್ನು ಷರತ್ತುಬದ್ಧವಾಗಿ ಹಿಂಪಡೆಯಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿದ್ದಾರೆ. ವಿಧಾನ ಸೌಧದ ಹಣಕಾಸು ಇಲಾಖೆಯ  ಐಎಸ್ ಎನ್ ಪ್ರಸಾದ್ ಕೊಠಡಿಯಲ್ಲಿ ಇಂದು … Read more

ಭ್ರಷ್ಟಾಚಾರಕ್ಕೆ ರಹದಾರಿ ಮಾಡಿಕೊಂಡವರು ಕಾಂಗ್ರೆಸ್ನವರು: ಸಿಎಂ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಫೆ. 15: ನಿಗಮದಲ್ಲಿ ಟೆಂಡರ್ ನೀಡುವಿಕೆಯಲ್ಲಿ ಎರಡು ಹಂತದ  ಪರಿಶೀಲನೆಯನ್ನು ತೆಗೆದು ಹಾಕಿ ಭ್ರಷ್ಟಾಚಾರಕ್ಕೆ ರಹದಾರಿ ಮಾಡಿಕೊಂಡಿದ್ದವರು ಕಾಂಗ್ರೆಸ್ನವರು. ಡಿ.ಕೆ.ಶಿವಕುಮಾರ್ ಅವರು ನೀರಾವರಿ ಸಚಿವರಿದ್ದಾಗ ಟೆಂಡರ್ ಪರಿಶೀಲನಾ ಸಮಿತಿಯನ್ನು ತೆಗೆದುಹಾಕಿದ್ದರು. ಟಿ. ಎ. ಸಿ ಯನ್ನೂ ತೆಗೆದುಹಾಕಿದ್ದರು. ನಾವು ಬಂದ ನಂತರ ಅದನ್ನು ಪುನ: ಸ್ಥಾಪನೆ ಮಾಡಿದ್ದೇವೆ. ಹೀಗಾಗಿ ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು … Read more

ನಿರ್ದೇಶಕ – ನಟ ಗುರುಪ್ರಸಾದ್ ಬಂಧನ – ಕೋರ್ಟ್ ಗೆ ಹಾಜರು

ಸುದ್ದಿ360 ಬೆಂಗಳೂರು ಜ.13: ಚೆಕ್ ಬೌನ್ಸ್‍ ಮೊಕದ್ದಮೆಗೆ ಸಂಬಂಧಪಟ್ಟಂತೆ ಸಿನಿಮಾ ನಟ ಹಾಗೂ ನಿರ್ದೇಶಕ ಗುರುಪ್ರಸಾದ್ ಅವರನ್ನು ಗಿರಿನಗರ ಪೊಲೀಸರು ಇಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನೆಗೋಶಿಯೇಬಲ್ ಇನ್ ಸ್ಟುಮೆಂಟ್ಸ್ ಕಾಯ್ದೆಯಡಿ ಗುರುಪ್ರಸಾದ್ ವಿರುದ್ಧ ಹೂಡಲಾಗಿದ್ದ ಮೊಕದ್ದಮೆ ವಿಚಾರಣೆಗೆ ಅವರು ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು. ನ್ಯಾಯಾಲಯದ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ತಿಳಿಸಿದ್ದಾರೆ.

ಮೆಟ್ರೋ ಕಾಮಗಾರಿ ದುರಂತ: ಅಧಿಕಾರಿ, ಗುತ್ತಿಗೆದಾರರ ಮೇಲೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು ಜ.10: ಮೆಟ್ರೊ ಕಾಮಗಾರಿ ದುರಂತಕ್ಕೆ ಕಾರಣರಾದ  ಹಿರಿಯ ಅಧಿಕಾರಿಗಳು, ಮುಖ್ಯಸ್ಥರ ಮೇಲೆ ಕ್ರಮಕೈಗೊಳ್ಳಲು ಸೂಚಿಸಿದ್ದು,  ಗುತ್ತಿಗೆದಾರ ಮೇಲೆ ಪ್ರಕರಣ ದಾಖಲಿಸುವುದರ ಜೊತೆಗೆ ಉನ್ನತ ಮಟ್ಟದ ತನಿಖೆ ಮಾಡುವಂತೆಯೂ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಪ್ರಶ್ನೆ ಇರುವುದು ಇಷ್ಟು ಅಸುರಕ್ಷಿತವಾಗಿ ಹೇಗೆ  ಕೆಲಸ ಮಾಡಿದರು ಎನ್ನುವುದನ್ನು ಪತ್ತೆ ಹಚ್ಚಿ, ಮುಂದೆ ಹೀಗಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತನಿಖೆ ಹಾಗೂ ತಾಂತ್ರಿಕ ಲೋಪದ ಏನು ಎಂಬುದರ ಬಗ್ಗೆ ಕ್ರಮ … Read more

ಜ.12 ರಂದು ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮನ

ಸುದ್ದಿ360 ಬೆಂಗಳೂರು, ಜ.3: ಪ್ರಧಾನಿ ನರೇಂದ್ರ ಮೋದಿಯವರು ಜನವರಿ 12 ರ ಮಧ್ಯಾಹ್ನದಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ಭಾಗವಹಿಸಿ  ಹಿಂದಿರುಗಲಿದ್ದಾರೆ ಎಂದು ತಿಳಿಸಿದರು. ಜ.19 ರಂದು ಪ್ರಧಾನಿ ಮೋದಿಯವರು ನಾರಾಯಣಪುರ … Read more

error: Content is protected !!