ಕಳಪೆ ಬೀಜ ವಿತರಣೆ-ಅಧಿಕಾರಿಗಳೇ ಹೊಣೆ: ಸಚಿವ ಚಲುವರಾಯಸ್ವಾಮಿ
ಮುಂಗಾರು ವಿಳಂಬ: ಸಮರ್ಪಕ ಬೀಜ ದಾಸ್ತಾನು, ವಿತರಣೆಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಬೆಳಗಾವಿ: ರಾಜ್ಯದಲ್ಲಿ ಮುಂಗಾರು ವಿಳಂಬವಾಗಿರುವುದರಿಂದ ಬಿತ್ತನೆ ಕೂಡ ತಡವಾಗುತ್ತಿದೆ. ಆದ್ದರಿಂದ ಮಳೆಯಾದ ಕೂಡಲೇ ಎಲ್ಲೆಡೆ ಏಕಕಾಲಕ್ಕೆ ಬಿತ್ತನೆ ಆರಂಭಗೊಳ್ಳಲಿದೆ. ಈ ಸಂದರ್ಭದಲ್ಲಿ ಬೀಜ-ಗೊಬ್ಬರ ಕೊರತೆಯಾಗದಂತೆ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಕಳಪೆ ಬೀಜ ವಿತರಣೆ ಕಂಡುಬಂದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಕೃಷಿ ಇಲಾಖೆಯ ಸಚಿವರಾದ ಎನ್.ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದರು. ಮುಂಗಾರು ಸಿದ್ಧತೆ ಪರಿಶೀಲನೆಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ … Read more